ಬೆಳ್ತಂಗಡಿ: ಫೆಬ್ರವರಿ 2024 ರಲ್ಲಿ ಜರಗಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ನಿಮಿತ್ತ ಅ.16 ರಂದು ಅಟ್ಟಳಿಗೆಯ ಸ್ತಂಭನ್ಯಾಸ ನೆರವೇರಿಸಿ ಬಳಿಕ ಶ್ರೀ ಬಾಹುಬಲಿ ಸಭಾಭವನಲ್ಲಿ ನಡೆದ ಸಮಾರಂಭದಲ್ಲಿಭಾಗವಹಿಸಿದ ಅತಿಥಿಗಳು ಮಾತನಾಡಿದರು.
ಯೋಜನೆ ಮತ್ತು ಅಂಕಿ ಅಂಶ ಇಲಾಖೆ ಸಚಿವ ಡಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು.
ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ಕನಕಗಿರಿ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಾಧ್ಯಕ್ಷ, ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ಕೋಲಾರ ಸಂಸದ ಮುನಿಸ್ವಾಮಿ, ವಿ.ಪ.ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಎಸ್.ಎಲ್.ಭೋಜೇ ಗೌಡ, ಮಾಜಿ ಸಚಿವ ಅಭಯಚಂದ್ರ ಜೈನ್, ಕೋಶಾಧಿಕಾರಿ ಜಯಕುಮಾರ್ ಕಂಬ್ಳಿ ಭಾಗವಹಿಸಿದರು.
ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಉಪಾಧ್ಯಕ್ಷ ನವೀನ್ ಚಂದ್ರ ಬಲ್ಲಾಳ್ ವಂದಿಸಿದರು. ವೇಣೂರು ಶ್ರೀ ದಿಗಂಬರ ಕ್ಷೇತ್ರ ಜೈನ ತೀರ್ಥಕ್ಷೇತ್ರ ಸಮಿತಿ ಜತೆ ಕಾರ್ಯದರ್ಶಿ ಮಹಾವೀರ್ ಜೈನ್ ನಿರೂಪಿಸಿದರು.
32, ಅಡಿ ಎತ್ತರದ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು 2024 ಫೆಬ್ರವರಿ 22 ರಿಂದ ಮಾರ್ಚ್ 1 ರ ವರೆಗೆ 9 ದಿನಗಳ ಕಾಲ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನೆರವೇರಲಿದೆ.