Advertisement

ಲೋಕಸಭೆಯಲ್ಲಿ ನಮ್ಮ ಧ್ವನಿಯನ್ನು ಮತ್ತೆ ಕೇಳಿಸಲಾಗುವುದು: ಭಗವಂತ್ ಮಾನ್

12:04 PM Mar 14, 2022 | Team Udayavani |

ನವದೆಹಲಿ: ಮಾರ್ಚ್ 16 ರಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಭಗವಂತ್ ಮಾನ್ ಸೋಮವಾರ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ. ಮಾನ್ ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದರು.

Advertisement

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಸಂಗ್ರೂರಿನ ಜನರು ನನ್ನ ಮೇಲೆ ಬಹಳ ವರ್ಷಗಳಿಂದ ಪ್ರೀತಿಯನ್ನು ಧಾರೆಯೆರೆದಿದ್ದಾರೆ, ಇದಕ್ಕಾಗಿ ತುಂಬಾ ಧನ್ಯವಾದಗಳು. ಈಗ ಇಡೀ ಪಂಜಾಬ್‌ಗೆ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಸಂಗ್ರೂರಿನ ಜನರಿಗೆ ನಾನು ಭರವಸೆ ನೀಡುತ್ತೇನೆ, ಕೆಲವೇ ತಿಂಗಳುಗಳಲ್ಲಿ, ಲೋಕಸಭೆಯಲ್ಲಿ ನಮ್ಮ ಧ್ವನಿಯನ್ನು ಮತ್ತೆ ಕೇಳಿಸಲಾಗುವುದು ಎಂದು ಮಾನ್ ಪಂಜಾಬಿಯಲ್ಲಿ ಟ್ವೀಟ್ ಮಾಡಿದ್ದಾರೆ.

48 ಹರೆಯದ ಆಪ್ ನಾಯಕ ಪ್ರಮಾಣವಚನ ಸಮಾರಂಭವು ನವನ್‌ಶಹರ್ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆಯಲಿದೆ.

117 ಸದಸ್ಯ ಬಲದ ಪಂಜಾಬ್ ಅಸೆಂಬ್ಲಿಯಲ್ಲಿ ಆಮ್ ಆದ್ಮಿ ಪಕ್ಷ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ.

ಧುರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ದಲ್ವಿರ್ ಸಿಂಗ್ ಗೋಲ್ಡಿ ಅವರನ್ನು 58,206 ಮತಗಳ ಅಂತರದಿಂದ ಮಾನ್ ಸೋಲಿಸಿರುವ ಮನ್ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.

Advertisement

ಮಾನ್ ಅವರು 2019 ರಲ್ಲಿ ಆಮ್ ಆದ್ಮಿ ಪಕ್ಷದಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದರು. ಅವರ ರಾಜೀನಾಮೆಯಿಂದ ಉಪಚುನಾವಣೆ ಎದುರಾಗಲಿದ್ದು , ಆಪ್ ಗೆಲ್ಲುವ ಎಲ್ಲಾ ಅವಕಾಶಗಳು ಇದ್ದು, ಯಾರನ್ನು ಕಣಕ್ಕಿಳಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next