ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆ ಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ವಿಜೇತರಾಗಿರುವ ಭಗವಂತ್ ಮನ್ ಅವರು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಊರಾದ ಖತ್ಕರ್ ಕಾಲನ್‌ನಲ್ಲಿ ಮಾ.16ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಆ ಹಿನ್ನೆಲೆ ಶನಿವಾರ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್‌ರನ್ನು ಭೇಟಿಯಾದ ಭಗವಂತ್ ಮನ್, ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಎಎಪಿಯ ಶಾಸಕರ ಬೆಂಬಲ ಪತ್ರವನ್ನು ರಾಜ್ಯ ಪಾಲರಿಗೆ ಹಸ್ತಾಂತರಿಸಲಾಗಿದ್ದು, ರಾಜ್ಯಪಾಲರು ಸರಕಾರ ರಚನೆಗೆ ಅನುಮತಿ ನೀಡಿದ್ದಾರೆ.
ಇದನ್ನೂ ಓದಿ:ಹೈಕಮಾಂಡ್ ಬುಲಾವ್; ಡಿ.ಕೆ.ಶಿವಕುಮಾರ್ ದಿಲ್ಲಿಗೆ
ಸಾವಂತ್ ರಾಜೀನಾಮೆ: ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್, ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ ದಂದು, ಗೋವಾ ಚುನಾವಣ ಫಲಿತಾಂಶ ಹೊರಬಿದ್ದ ಹಿನ್ನೆಲೆಯಲ್ಲಿ ಅವರು ಶನಿವಾರ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.