Advertisement

ಭಾಗವತ್‌  ಪಟ್ಟು: ಸಡ್ಡು ಹೊಡೆದು ಧ್ವಜಾರೋಹಣ

08:16 AM Aug 16, 2017 | Team Udayavani |

ಪಾಲಕ್ಕಾಡ್‌: ಜಿಲ್ಲಾಡಳಿತದ ಆದೇಶವನ್ನು ಧಿಕ್ಕರಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಮಂಗಳವಾರ ಕೇರಳದ ಪಾಲಕ್ಕಾಡ್‌ ಜಿಲ್ಲೆಯ ಸರಕಾರಿ ಅನುದಾನಿತ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದರಿಂದ ಕೆಂಡಾಮಂಡಲವಾಗಿರುವ ಜಿಲ್ಲಾಧಿಕಾರಿ ಪಿ.ಮೇರಿಕುಟ್ಟಿ ಅವರು, ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Advertisement

ಸರಕಾರಿ ಅನುದಾನಿತ ಶಾಲೆಗಳಲ್ಲಿ ಕೇವಲ ಚುನಾಯಿತ ಪ್ರತಿನಿಧಿಗಳು, ಶಾಲಾ ಅಧಿಕಾರಿಗಳು ಅಥವಾ ಸರಕಾರಿ ಅಧಿಕಾರಿಗಳು ಮಾತ್ರವೇ ತ್ರಿವರ್ಣ ಧ್ವಜ ಹಾರಿಸಬೇಕು. ಹಾಗಾಗಿ, ಆರೆಸ್ಸೆಸ್‌ ಮುಖ್ಯಸ್ಥ ಭಾಗವತ್‌ ಅವರಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡು ವುದಿಲ್ಲ ಎಂದು ಜಿಲ್ಲಾಧಿಕಾರಿ ಸೋಮವಾರ ರಾತ್ರಿಯೇ ಆದೇಶ ಹೊರಡಿಸಿದ್ದರು. ಆದರೆ, ಅದನ್ನು ಧಿಕ್ಕರಿಸಿದ ಭಾಗವತ್‌, ಮಂಗಳವಾರ ಅದೇ ಶಾಲೆಗೆ ಹೋಗಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಸಿ, “ಶಾಲೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸುತ್ತೇನೆ’ ಎಂದಿದ್ದಾರೆ. ಏತನ್ಮಧ್ಯೆ, ಭಾಗವತ್‌ ಧ್ವಜಾರೋಹಣ ವಿವಾದ ಕುರಿತು ಮಾತನಾಡಿರುವ ಬಿಜೆಪಿ ಹಾಗೂ ಆರೆಸ್ಸೆಸ್‌, “ದೇಶದ ತ್ರಿವರ್ಣ ಧ್ವಜವನ್ನು ಹಾರಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ’ ಎಂದು ಹೇಳಿವೆ.

ಇನ್ನೊಂದೆಡೆ ಶಾಲೆಯ ಆಡಳಿತ ಮಂಡ ಳಿಯು, “ಜಿಲ್ಲಾಧಿಕಾರಿಯವರ ಆದೇಶ ಉಲ್ಲಂ ಸಲಾಗಿಲ್ಲ. ಆಡಳಿತ ಮಂಡಳಿ ಅಧಿಕಾರಿಗಳ ಮತ್ತು ಮುಖ್ಯೋಪಾಧ್ಯಾಯರ ಹಾಜರಿಯಲ್ಲಿ ಪ್ರಮುಖ ವ್ಯಕ್ತಿಯೊಬ್ಬರು ಧ್ವಜಾರೋಹಣ ನೆರವೇರಿಸಬೇಕು ಎಂಬುದಾಗಿ ಆದೇಶದಲ್ಲಿ ಉಲ್ಲೇಖೀಸ ಲಾಗಿತ್ತು’ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next