Advertisement
ಅವರು ರವಿವಾರ ಕ್ಷೇತ್ರದ ಅಮೃತ ವರ್ಷಿಣಿ ಸಭಾಭವನದಲ್ಲಿ ಭಜನೋತ್ಸವ ಹಾಗೂ 20ನೇ ವರ್ಷದ ಭಜನ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಜನೆಗೆ ವ್ಯಕ್ತಿತ್ವವನ್ನು ಪರಿವರ್ತಿಸುವ ಶಕ್ತಿಯಿದ್ದು, ಅದು ಆತನ ಶುದ್ಧೀಕರಣವನ್ನೂ ಮಾಡುತ್ತದೆ. ಇದು ಅಪಾರ ವಾದ ಶಕ್ತಿ ಹಾಗೂ ತೇಜಸ್ಸನ್ನೂ ಹೊಂದಿರುತ್ತದೆ ಎಂದರು.
ಶ್ರೀಧಾಮ ಮಾಣಿಲ ಶ್ರೀ ಮೋಹನ ದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಹೇಮಾವತಿ ವಿ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್, ಶ್ರದ್ಧಾ ಅಮಿತ್ ಕುಮಾರ್, ಡಾ| ಯಶೋವರ್ಮ, ಸೋನಿ ಯಶೋ ವರ್ಮ ವೇದಿಕೆಯಲ್ಲಿದ್ದರು. ಭಜನ ಕಮ್ಮಟದ ಕಾರ್ಯದರ್ಶಿ ಮಮತಾ ರಾವ್ ವರದಿ ಮಂಡಿಸಿದರು. ಭಜನ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಬಿ. ಜಯರಾಮ ನೆಲ್ಲಿತ್ತಾಯ ವಂದಿ ಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದ ಆರಂಭದಲ್ಲಿ ಸುಮಾರು 3,000 ಭಜನಪಟುಗಳಿಂದ ಆಕರ್ಷಕ ಶೋಭಾ ಯಾತ್ರೆ ನಡೆಯಿತು.
Related Articles
ಚಿತ್ರನಟ ಪುನೀತ್‌ರಾಜ್‌ಕುಮಾರ್ ಮಾತನಾಡಿ, ಧರ್ಮಸ್ಥಳವೆಂಬ ಹೆಸರಿನಲ್ಲೇ ವಿಶೇಷವಾದ ಶಕ್ತಿಯಿದೆ. ಹಿಂದಿನಿಂದಲೂ ಕ್ಷೇತ್ರಕ್ಕೆ ಬಂದು ದೇವರ ದರ್ಶನ ಪಡೆಯುತ್ತಿದ್ದೇನೆ. ತಂದೆಯವರ ಜತೆ ಚಿತ್ರೀಕರಣದಲ್ಲೂ ಪಾಲ್ಗೊಂಡಿದ್ದೇನೆ ಎಂದರು. ಡಾ| ಹೆಗ್ಗಡೆಯವರು ಹಾಗೂ ಗಣ್ಯರ ಆಗ್ರಹದ ಮೇರೆಗೆ ಪುನೀತ್, “ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು ರಾಘವೇಂದ್ರ’ ಹಾಡನ್ನು ಹಾಡಿ ರಂಜಿಸಿದರು.
Advertisement