Advertisement
ಸೆ. 23ರಂದು ಪೂರ್ವಾಹ್ನ ಜೂಯಿನಗರದ ಬಂಟ್ಸ್ ಸೆಂಟರ್ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದ ಆರ್. ಎನ್. ಶೆಟ್ಟಿ ವೇದಿಕೆಯಲ್ಲಿ ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಭಜನ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದು, ಭಜನೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಲ್ಲಿ ನಾವು ಮುಂದಾಗಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಕರೆತಂದು ಭಜನೆಯ ಬಗ್ಗೆ ಅವರಿಗೆ ಉತ್ತೇಜಿಸಬೇಕು ಎಂದು ನುಡಿದು ಶುಭಹಾರೈಸಿದರು.
ರೊಂದಿಗೆ ಅಪಾರ ಸಂಖ್ಯೆಯಲ್ಲಿ ಮಂದಿರ ನಿರ್ಮಾಣ ಗೊಂಡಿದೆ. ಆದ್ದರಿಂದ ಜರನು ಆಧ್ಯಾತ್ಮಿಕ ಚಿಂತನೆ ಬೆಳೆಸಿಕೊಂಡು ಮುನ್ನಡೆಯುತ್ತಿದ್ದಾರೆ ಎಂದು ಹೇಳಬಹುದು. ಇದು ನಮ್ಮ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದರು.
ಬೋಂಬೆ ಬಂಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ನ್ಯಾಯವಾದಿ ಸುಭಾಷ್ ಶೆಟ್ಟಿ ಅವರು ಮಾತನಾಡಿ, ಭಜನೆಯಿಂದ ಒಗ್ಗಟ್ಟು ಮತ್ತು ಧಾರ್ಮಿಕ ಚಿಂತನೆ ಬೆಳೆಯುತ್ತದೆ. ದೇವರನ್ನು ಸಾಕ್ಷಾತ್ಕರಿಸಿಕೊಳ್ಳಲು ಉತ್ತಮ ಸಾಧನ ಎಂದರೆ ಅದು ಭಜನೆ ಮಾತ್ರ. ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದರು.
Related Articles
Advertisement
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಜೆ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳಾ ವಿಭಾಗದ ಸಾಧನೆಗಳನ್ನು ವಿವರಿಸಿದರು. ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಛತ್ರಪತಿ ಶಿವಾಜಿ ಪ್ರಶಸ್ತಿ ವಿಜೇತೆ ಸರಳಾ ಬಿ. ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಚಂದ್ರಾವತಿ ತಿಲಕ ಚೌಟ ಅವರು ಪ್ರಾರ್ಥನೆಗೈದರು. ಪತ್ರಕರ್ತ ದಯಾಸಾಗರ್ ಚೌಟ ಅವರು ಕಾರ್ಯಕ್ರಮ ನಿರ್ವಹಿಸಿದರು. ಲತಾ ಗೋಪಾಲ್ ಶೆಟ್ಟಿ ವಂದಿಸಿದರು. ಆನಂತರ ನಡೆದ ಸ್ಪರ್ಧೆಯಲ್ಲಿ ನಗರ, ಉಪನಗರಗಳ ಸುಮಾರು 30 ತಂಡಗಳು ಭಾಗವಹಿಸಿದ್ದವು.
ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷರುಗಳಾದ ನ್ಯಾಯವಾದಿ ಪ್ರಕಾಶ್ ಎಲ್. ಶೆಟ್ಟಿ, ನ್ಯಾಯವಾದಿ ರತ್ನಾಕರ ಶೆಟ್ಟಿ. ಬಾಬು ಎನ್. ಶೆಟ್ಟಿ, ಮುರಳಿ ಕೆ. ಶೆಟ್ಟಿ, ಜಯ ಸಿ. ಶೆಟ್ಟಿ, ಗೋಪಾಲ್ ವೈ. ಶೆಟ್ಟಿ, ನ್ಯಾಯವಾದಿ ಸರ್ವೋತ್ತಮ ಶೆಟ್ಟಿ, ರಮೇಶ್ ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಹೀರಾ ಆರ್. ಶೆಟ್ಟಿ, ಶೈಲಜಾ ಎ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಅಸೋಸಿಯೇಶನ್‌ನ ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಶಾರದಾ ಎಲ್. ಶೆಟ್ಟಿ, ಕಾರ್ಯದರ್ಶಿ ಲತಾ ಜಿ. ಶೆಟ್ಟಿ, ಕೋಶಾಧಿಕಾರಿ ಪ್ರಭಾ ಜೆ. ಶೆಟ್ಟಿ, ಜತೆ ಕಾರ್ಯದರ್ಶಿ ಶಾಂತಾ ಎನ್. ಶೆಟ್ಟಿ, ಜತೆ ಕೋಶಾಧಿಕಾರಿ ಕೃಷ್ಣ ಕುಮಾರಿ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಈ ನಗರದಲ್ಲಿ ಅದರಲ್ಲೂ ಬಂಟರು ಮನೆ, ಮನೆಯಲ್ಲೂ ಭಜನೆ ಮಾಡುವ ಪರಿಪಾಠವನ್ನು ಬೆಳೆಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಭಜನೆಯಿಂದ ಮನೆಯ ಎಲ್ಲಾ ಸದಸ್ಯರಲ್ಲೂ ಆಧ್ಯಾತ್ಮಿಕ ಭಾವನೆ ಬೆಳೆಯುತ್ತದೆ. ಭಜನೆ ಹೇಳುತ್ತಾ ಚಪ್ಪಾಳೆ ತಟ್ಟುವುದರಿಂದ ಆರೋಗ್ಯ ಭಾಗ್ಯ ಲಭಿಸುತ್ತದೆ. ನಮ್ಮೆಲ್ಲರ ಬದುಕು ಸನ್ಮಾರ್ಗದಲ್ಲಿ ನಡೆಯಲು ಭಜನೆ ಅತ್ಯಾವಶ್ಯಕವಾಗಿದೆ. ಮಹಿಳಾ ವಿಭಾಗವು ಭಜನೆಗೆ ವಿಶೇಷವಾದ ಪ್ರಾಧಾನ್ಯತೆಯನ್ನು ನೀಡುತ್ತಿದ್ದು, ಪ್ರತೀ ವರ್ಷ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಅಭಿನಂದನಾರ್ಹ. ಸಂಸ್ಥೆಯ ಎಲ್ಲಾ ಸಮಾಜಪರ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಸಹಕಾರ, ಪ್ರೋತ್ಸಾಹ ಸದಾಯಿರಲಿ
– ನ್ಯಾಯವಾದಿ ಉಪ್ಪೂರು ಶೇಖರ್ ಶೆಟ್ಟಿ ಅಧ್ಯಕ್ಷರು : ಬೋಂಬೆ ಬಂಟ್ಸ್ ಅಸೋಸಿಯೇಶನ್. ಚಿತ್ರ-ವರದಿ: ಸುಭಾಷ್ ಶಿರಿಯಾ