Advertisement
ಕದ್ರಿ ಶ್ರೀ ಮಂಜುನಾಥ ದೇವರ ಸನ್ನಿಧಿಯಲ್ಲಿ ಶಿವಲಿಂಗಕ್ಕೆ ಭಕ್ತರು ಅಭಿಷೇಕ ಸಲ್ಲಿಸಿದರು. ರುದ್ರಾಭಿಷೇಕ, ಶಿವಪೂಜೆ, ರಾತ್ರಿ ರಂಗಪೂಜೆ, ಉತ್ಸವ ಕಾರ್ಯ ಕ್ರಮಗಳು ಜರಗಿದವು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವನಿಗೆ ವಿಶೇಷ ಪೂಜೆ, ಸೀಯಾಳ ಅಭಿಷೇಕ, ಶರವು ಶ್ರೀ ಮಹಾಗಣಪತಿ ದೇವಳದಲ್ಲಿ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನಡೆಯಿತು. ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಾಮೂಹಿಕ ಶತರುದ್ರಾಭಿಷೇಕ ಜರಗಿತು.
ಕದ್ರಿ ದೇವಸ್ಥಾನ, ಶರವು ಮಹಾಗಣಪತಿ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಸಹಿತ ಈಶ್ವರ ದೇವಸ್ಥಾನಗಳ ಮುಂಭಾಗದಲ್ಲಿ ಶಿವನಿಗೆ ಪ್ರಿಯವಾದ ಬಿಲ್ವಪತ್ರೆ, ಎಕ್ಕದ ಹೂವು, ಎಳನೀರು, ತುಳಸಿ ಮಾಲೆ, ಹಣ್ಣು-ಕಾಯಿ ಮೊದಲಾದ ಪೂಜಾ ಸಾಮಗ್ರಿಗಳ ಅಂಗಡಿಯವರು ಬಿರುಸಿನ ವ್ಯಾಪಾರದಲ್ಲಿ ತೊಡಗಿದ್ದರು.
Related Articles
ಮಹಾ ಶಿವರಾತ್ರಿ ಅಂಗವಾಗಿ ನಗರದ ದೇವಸ್ಥಾನಗಳಲ್ಲಿ ಮಾತ್ರವಲ್ಲದೆ, ಕೆಲವು ಮನೆಗಳಲ್ಲಿಯೂ ಆಚರಣೆ ಬಿರುಸಾಗಿತ್ತು. ಮನೆಮಂದಿ ಸೇರಿ ಶಿವ ದೇವರ ಪೂಜಾ ಕಾರ್ಯದಲ್ಲಿ ತೊಡಗಿದರು. ರಾತ್ರಿಯಿಡೀ ಶಿವರಾತ್ರಿ ಜಾಗರಣೆ ವಿಶೇಷವಾಗಿತ್ತು. ಭಜನೆ, ಶಿವನಾಮ ಜಪದ ಮೂಲಕ ಮನೆಮಂದಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಿಸಿದರು.
Advertisement