Advertisement

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

07:09 PM Sep 18, 2024 | Team Udayavani |

“ಭಲೆ ಹುಡುಗ’ ಎಂಬ ಸಿನಿಮಾವೊಂದು ಆರಂಭವಾಗುತ್ತಿದೆ.ರವಿಚಂದ್ರ ಹಾಗೂ ಭೀಮರಾಜ್‌ ಅವರು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

Advertisement

ಹಳ್ಳಿಯ ಜನರಲ್ಲಿ ಜಾಗೃತಿ ಮೂಡಿಸುವ ಹುಡುಗನೊಬ್ಬನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರದುರ್ಗದ ಎಂ.ನಿಂಗ ರಾಜು ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಬುದ್ಧಿವಂತ ಮಕ್ಕಳು ಹಾಗೂ ಹಳ್ಳಿಯ ಜನರ ಸುತ್ತ ನಡೆಯುವ ಕಥಾಹಂದರ ಹೊಂದಿರುವ ಭಲೆ ಹುಡುಗ ಚಿತ್ರದಲ್ಲಿ ನಿರ್ದೇಶಕ ನಿಂಗರಾಜು ಅವರ ಪುತ್ರ ಶರತ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಕ್ಟೋಬರ್‌ ರಜೆಯಲ್ಲಿ ಈ ಚಿತ್ರದ ಶೂಟಿಂಗ್‌ ಪ್ರಾರಂಭಿಸಿ, ಚಿತ್ರದುರ್ಗ, ಚಂದವಳ್ಳಿ, ನಂದಿ ಗಿರಿಧಾಮದ ಸುತ್ತ ಮುತ್ತ ಒಂದು ತಿಂಗಳ ಕಾಲ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗುತ್ತಿದೆ. 12 ವರ್ಷದ ಹುಡುಗನೊಬ್ಬ ತನ್ನ ಹಳ್ಳಿಯಲ್ಲಿ ನಡೆಯುತ್ತಿರುವ ಅರಾಜಕತೆಯ ವಿರುದ್ಧ ತಿರುಗಿ ಬೀಳುತ್ತಾನೆ ಅನ್ನೋದು ಚಿತ್ರದ ಕಥಾಹಂದರ.

ಮಾಸ್ಟರ್‌ ಶರತ್‌, ಮಾ. ಘನಶ್ಯಾಮ್, ಬೇಬಿ ಜಯಲಲಿತ, ಮಾ. ಅಂಜನ್‌, ಬಲರಾಂ, ಎಂ ವಿ. ಸಮಮ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next