Advertisement
ಈ ವೇಳೆ ಮಾತನಾಡಿದ ಸಚಿವರು, ಲಾಕ್‌ಡೌನ್ ಸಡಿಲಿಕೆ ಬಳಿಕ ಜಿಲ್ಲೆ ಸೇರಿ ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಇದೇ ವೇಳೆ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ತರಿಸಿದೆ. ಸೋಂಕು ನಿಯಂತ್ರಿಸಲು ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷಿಸಲು ಈಗಾಗಲೇ ಬೀದರ್‌ನಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಿರುವ ಪರಿಣಾಮ ತ್ವರಿತವಾಗಿ ವರದಿ ಸಿಗುತ್ತಿದೆ. ಸೋಂಕಿತರು ಹೆಚ್ಚಾಗುತ್ತಿರುವ ಕಡೆಗಳಲ್ಲಿ ತಕ್ಷಣವೇ ಚಿಕಿತ್ಸೆ ನೀಡಬೇಕು ಎನ್ನುವ ಉದ್ದೇಶದಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಐಸೋಲೇಷನ್ ವಾರ್ಡ್ ಸ್ಥಾಪಿಸಲಾಗಿದೆ ಎಂದರು.
ಆರ್, ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗ್ವಾರ್ ಇತರರು ಇದ್ದರು.