ಭಾಲ್ಕಿ: ತಾಲೂಕಿನ ಉಚ್ಛಾ ಹಾಗೂ ಮೊರಂಬಿ ಗ್ರಾಮಗಳಿಗೆ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲಿಸಿದರು.
ಶಾಸಕ ಈಶ್ವರ ಖಂಡ್ರೆ ಅಧಿಕಾರಿಗಳ ತಂಡದೊಂದಿಗೆ ಉಚ್ಛಾ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ಚೆಕ್‌ಡ್ಯಾಂ ಹಾಗೂ ಮೊರಂಬಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಸಮೀಪ
ಸಸಿ ನೆಡಲು ತೊಡುತ್ತಿರುವ ತಗ್ಗು ವೀಕ್ಷಿಸಿ, ಉದ್ಯೋಗ ಖಾತ್ರಿ ಚೀಟಿ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕೋವಿಡ್ ಸೋಂಕು ಹರಡುವಿಕೆ ಭೀತಿಯಿಂದ ಇಡೀ ದೇಶವೇ ಲಾಕ್‌ಡೌನ್ ಮಾಡಲಾಗಿದೆ. ಇದರಿಂದ ಬಡ ಜನರು, ಕೂಲಿ ಕಾರ್ಮಿಕರು ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ಷೇತ್ರದ ಬಡವರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಈಗಾಗಲೇ ವೈಯಕ್ತಿಕವಾಗಿ ನಾನು ಹಾಗೂ ತಮ್ಮ ಬೆಂಬಲಿಗರು ಆಹಾರದ ಪೊಟ್ಟಣ, ತರಕಾರಿ ಕಿಟ್ ನೀಡುವ ಮೂಲಕ ನೆರವಿಗೆ ಧಾವಿಸಲಾಗಿದೆ. ಪಡಿತರ ಕಾರ್ಡ್ ಹೊಂದಿದ ಎಲ್ಲ ಫಲಾನುಭವಿಗಳು, ಕಾರ್ಡ್ ರಹಿತ ಎಲ್ಲ ಜನರಿಗೂ ಎರಡು ತಿಂಗಳ ಪಡಿತರ ಮುಂಗಡವಾಗಿ ನೀಡಲು ಕ್ರಮ ಜರುಗಿಸಲಾಗಿದೆ. ಜತೆಗೆ ಎಲ್ಲ 40 ಗ್ರಾಪಂ ವ್ಯಾಪ್ತಿಗಳಲ್ಲಿ ನರೇಗಾದಡಿ ಪ್ರತಿ ಗ್ರಾಪಂನಿಂದ ಒಬ್ಬರಿಗೆ 275 ರೂ. ಕೂಲಿಯಂತೆ ಪ್ರತಿದಿನ ಕನಿಷ್ಟ 250 ಜನರಿಗೆ 25 ದಿವಸ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಜಿಪಂ ಸದಸ್ಯ ಅಂಬಾದಾಸ ಕೋರೆ, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್, ತಾಪಂ ಇಒ ಬಸವರಾಜ ನಾಯಕರ್, ಶಶಿಧರ ಕೋಸಂಬೆ, ಪಿಡಿಒ ರಾಹುಲ
ಸೇರಿದಂತೆ ಹಲವರು ಇದ್ದರು.