Advertisement

20 ಇಲಾಖೆ ನಿರ್ದೇಶಕರ ಅವಿರೋಧ ಆಯ್ಕೆ

04:07 PM Jun 14, 2019 | Naveen |

ಭಾಲ್ಕಿ: ಪಟ್ಟಣದ ವಿವಿಧ ಬೂತ್‌ ಗಳಲ್ಲಿ ಗುರುವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯಿತು. ಶಿಕ್ಷಕರು ಸೇರಿದಂತೆ ಎಲ್ಲಾ ಸರ್ಕಾರಿ ನೌಕರರು ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾಯಿಸಿದರು.

Advertisement

ಪಟ್ಟಣದಲ್ಲಿ ಸ್ಥಾಪಿಸಲಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2 ಬೂತ್‌ಗಳು, ಉರ್ದು ಪ್ರಾಥಮಿಕ ಶಾಲೆಯ ಎರಡು ಬೂತ್‌ಗಳು ಸೇರಿದಂತೆ ಎಲ್ಲಾ ಬೂತ್‌ಗಳ ಒಟ್ಟು ಮತದಾನ ಶೇ.90 ಆಯಿತು. ಸುಮಾರು 25 ಇಲಾಖೆಗಳ ನಿರ್ದೇಶಕರ ಸ್ಥಾನಗಳಿಗಾಗಿ ನಡೆಯಬೇಕಿದ್ದ ಚುನಾವಣೆಯಲ್ಲಿ 20 ಇಲಾಖೆಯ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಉಳಿದ 5 ಇಲಾಖೆಗಳಾದ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ, ಪ್ರೌಢಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಗಳ ನಿರ್ದೇಶಕರ ಸ್ಥಾನಗಳು ಮತ್ತು ತೋಟಗಾರಿಕೆ ಇಲಾಖೆಯ ಒಬ್ಬ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಿತು.

ಚುನಾವಣೆ ನಂತರ ಮತ ಎಣಿಕೆ ಕಾರ್ಯ ನಡೆಸಿ, ಪ್ರೌಢಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಪದವಿಪೂರ್ವ ಶಿಕ್ಷಣ ಮತ್ತು ತೋಟಗಾರಿಕೆ ಇಲಾಖೆಯ ಒಬ್ಬೊಬ್ಬ ನಿರ್ದೇಶಕರ ಸ್ಥಾನಗಳ ಫಲಿತಾಂಶ ಪ್ರಕಟಿಸಲಾಯಿತು. ಪ್ರೌಢಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿ ಡಾ| ಕಾಶಿನಾಥ ಚಲವಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಷ್ಟಶೀಲ ಮಿತ್ರಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಸುಭಾಷ ಗೋಬರೆ, ತೋಟಗಾರಿಕೆ ಇಲಾಖೆಯ ರಾಜಕುಮಾರ ಮಾನಕಾರೆ ಅವರು ಆಯ್ಕೆಯಾಗಿದ್ದಾರೆ. ಇನ್ನು ಪ್ರಾಥಮಿಕ ಶಿಕ್ಷಣ ಇಲಾಖೆಯ ಮೂರು ನಿರ್ದೇಶಕರ ಸ್ಥಾನಗಳಿಗಾಗಿ ನಡೆದ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬೀಳುವ ಸಂಭವವಿದೆ ಎಂದು ಚುನಾವಣಾಧಿಕಾರಿ ಬಿ.ಎಸ್‌.ಪಾಟೀಲ ತಿಳಿಸಿದ್ದಾರೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಚುನಾಯಿತ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next