Advertisement

ಆರೋಗ್ಯ ಕೇಂದ್ರಗಳಿಗೆ ಭೇಟಿ

03:15 PM Apr 22, 2020 | Naveen |

ಭಾಲ್ಕಿ: ತಾಲೂಕಿನ ಹಲಬರ್ಗಾ, ಧನ್ನೂರಾ(ಎಚ್‌), ಕಣಜಿ, ಹಾಲಹಳ್ಳಿ(ಕೆ), ಖಟಕ ಚಿಂಚೋಳಿ, ಡಾವರಗಾಂವ, ಕಟ್ಟಿತೂಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಕೋವಿಡ್ ಹೋರಾಟಗಾರರಿಗೆ ಆಹಾರದ ಕಿಟ್‌ ವಿತರಣೆ ಮಾಡಿ ಕೋವಿಡ್ ಸೋಂಕು ನಿಯಂತ್ರಣದ ಕುರಿತು ಮಾಹಿತಿ ಕಲೆ ಹಾಕಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಕೋವಿಡ್ ಸೋಂಕು ಸಾಂಕ್ರಾಮಿಕ ರೋಗವಾಗಿದ್ದರಿಂದ ಒಬ್ಬರಿಂದ ಮತ್ತೊಬ್ಬರಿಗೆ ತಗಲುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಹೊರ ಜಿಲ್ಲೆ, ರಾಜ್ಯಗಳಿಂದ ಬಂದ ಜನರ ಮಾಹಿತಿ ಕಲೆ ಹಾಕಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡುವಂತೆ ಸಲಹೆ ನೀಡಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಔಷಧ , ಸ್ಯಾನಿಟೈಸರ್‌ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿ ಕೊರೊನಾ ತಡೆಗೆ ಮುಂದಾಗಬೇಕು ಎಂದು ಹೇಳಿದರು.

ತಹಶೀಲ್ದಾರ್‌ ಅಣ್ಣಾರಾವ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅ ಧಿಕಾರಿ ಬಸವರಾಜ ನಾಯಕರ್‌, ಡಿವೈಎಸ್‌ಪಿ ಡಾ| ದೇವರಾಜ ಬಿ., ತಾಲೂಕು ವೈದ್ಯಾಧಿ ಕಾರಿ ಡಾ| ಜ್ಞಾನೇಶ್ವರ ನೀರಗೂಡೆ, ಧನರಾಜ ಪಾಟೀಲ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next