Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸನ್ನದ್ಧರಾಗಿ: ರುದನೂರ

05:26 PM May 31, 2020 | Naveen |

ಭಾಲ್ಕಿ: ಪ್ರಸ್ತುತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದು ಇಲಾಖೆಗೆ ಅತಿದೊಡ್ಡ ಸವಾಲಾಗಿದೆ. ಎಲ್ಲಾ ಮುಖ್ಯ ಶಿಕ್ಷಕರು ಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸನ್ನದ್ಧರಾಗಬೇಕು ಎಂದು ಬಿಇಒ ಸಿದ್ದವೀರಯ್ನಾ ರುದನೂರ ಹೇಳಿದರು.

Advertisement

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ ಎಸ್‌ಎಲ್‌ಸಿ ಪರೀಕ್ಷಾ ಪೂರ್ವಸಿದ್ಧತೆ ಕುರಿತು ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗಾಗಿ ಪ್ರತ್ಯೇಕವಾಗಿ ಕರೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್‌-19 ಎದುರಿಸುವುದರೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬೇಕಾದ ಕಾರಣ ಪ್ರಸ್ತುತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲಾಖೆಗೆ ದೊಡ್ಡ ಸವಾಲಾಗಿದೆ. ಹೈಕೋರ್ಟ್‌ ನೀಡಿದ ನಿರ್ದೇಶನದಂತೆ, ಯಾವುದೇ ತಪ್ಪು ಎಸಗದಂತೆ ಪರೀಕ್ಷೆ ನಡೆಸಬೇಕಾಗಿದೆ. ಪರೀಕ್ಷಾ ಕೇಂದ್ರದ ಒಳಗೂ ಮತ್ತು ಹೊರಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲು ತಯಾರಿ ಮಾಡಿಕೊಳ್ಳಬೇಕಾಗಿದೆ ಎಂದರು.

ಪ್ರತಿ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೇವಲ 18 ರಿಂದ 20 ರೊಳಗೆ ವಿದ್ಯಾರ್ಥಿಗಳ ಆಸನ ವ್ಯವಸ್ಥೆ ಮಾಡಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿಶೇಷ ಅಗತ್ಯ ಉಳ್ಳ ವಿದ್ಯಾರ್ಥಿಗಳಿಗಾಗಿ ಎರಡು ಹೆಚ್ಚುವರಿ ಕೋಣೆಗಳು ಇರಬೇಕು ಎನ್ನುವ ಅನೇಕ ಅಂಶಗಳೊಂಡಂತೆ ಪರೀಕ್ಷಾ ಕೇಂದ್ರದಲ್ಲಿ ಈಗಿನಿಂದಲೇ ತಯಾರಿ ನಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿಕೊಂಡು ಪರೀಕ್ಷಾ ಕೊಠಡಿಯಲ್ಲಿ ಆಸನರಾಗಬೇಕು. ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆಯವರ ಸಹಾಯ ಪಡೆದು ಕಟ್ಟುನಿಟ್ಟಿನಿಂದ ಪರೀಕ್ಷೆ ನಡೆಸಬೇಕು ಎಂದರು. ಇಸಿಒ ಜಯರಾಮ ಬಿರಾದಾರ, ಸಹದೇವ, ಬಾಲಾಜಿ ರಾಜೂರೆ, ನಿಜಗುಣಯ್ನಾ ಹಿರೇಮಠ, ಶ್ರೀಕಾಂತ ಮೂಲಗೆ, ಅನಿಲ ಗಾಯಕವಾಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next