Advertisement
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಮೀರಾಬಾಯಿ ಜನಾರ್ದನರಾವ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಾಯಿಗಾಂವ ವ್ಯಾಪ್ತಿಯ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇರುವ ಬಗ್ಗೆ ವಿಷಯ ಪ್ರಸ್ತಾಪಿಸಿ ಸಭೆಯ ಗಮನ ಸೆಳೆದರು.
Related Articles
Advertisement
ಚಳಕಾಪೂರ ಗ್ರಾಮದಲ್ಲಿ ಕುವೆಂಪು ಹೆಸರಿನಲ್ಲಿ ಶತಮಾನೋತ್ಸವ ಶಾಲೆ ನಡೆಯುತ್ತಿದೆ. ಆದರೆ, ವ್ಯವಸ್ಥೆ ಇಲ್ಲದೇ ಅಧೋಗತಿಗೆ ಬಂದಿದೆ. ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಸರಿಪಡಿಸುವ ಪ್ರಯತ್ನ ಮಾಡುತ್ತಿಲ್ಲ. ಪರಿಣಾಮ ಸರಕಾರಿ ಶಾಲೆಗೆ ಮಕ್ಕಳಿಗೆ ಸೇರಿಸುವ ಪಾಲಕರ ಮನಸ್ಥಿತಿ ಬದಲಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುತ್ತಿದೆ ಎಂದು ಸದಸ್ಯ ಕಿಶೋರರಾವ್ ಬೇಸರ ವ್ಯಕ್ತ ಪಡಿಸಿದರು.
ಇನ್ನಾದರೂ ಅಧಿಕಾರಿಗಳು ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಪರವಾಗಿ ಸಭೆಗೆ ಬಂದಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್ ಸಂಬಂಧಿ ತರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಕಂಪ್ಯೂಟರ್ ಶಿಕ್ಷಕರನ್ನು ನೇಮಿಸಿ: ತಾಲೂಕಿನ ಎಲ್ಲ ಸರಕಾರಿ ಶಾಲೆಗಳಲ್ಲಿರುವ ಕಂಪ್ಯೂಟರ್‌ಗಳು ಶಿಕ್ಷಕರು ಇಲ್ಲದೇ ಧೂಳು ತಿನ್ನುತ್ತಿವೆ. ಸರಕಾರ ಹಾಗೂ ಶಿಕ್ಷಣ ಇಲಾಖೆ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ತಿಳಿದುಕೊಳ್ಳಲು ಎಲ್ಲ ಶಾಲೆಗಳಿಗೆ ಕಂಪ್ಯೂಟರ್ ನೀಡುತ್ತಿದೆ. ಆದರೆ, ಕಂಪ್ಯೂಟರ್ ಕಲಿಸಲು ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅ ಧಿಕಾರಿಗಳು ಮುಂದಾಗುತ್ತಿಲ್ಲ. ಇದರಿಂದ ಮಕ್ಕಳು ಕಂಪ್ಯೂಟರ್ ಕಲಿಕೆಯಿಂದ ದೂರ ಸರಿಯುವಂತಾಗಿದೆ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು.
ಇದಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್ ಅವರು ಕೂಡ ಸಹಮತ ವ್ಯಕ್ತ ಪಡಿಸಿ, ಬರುವ ಶೈಕ್ಷಣಿಕ ವರ್ಷದಿಂದಾದರೂ ಅತಿಥಿ ರೂಪದಲ್ಲಾದರೂ ಕಂಪ್ಯೂಟರ್ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಕಲಿಕೆಗೆ ಅವಕಾಶ ಮಾಡಿಕೊಡುವಂತೆ ಇಲಾಖೆಗೆ ಪತ್ರ ಬರೆಯುವಂತೆ ಕ್ಷೇತ್ರ ಸಮನ್ವಯಾಧಿ ಕಾರಿ ಹೋಳ್ಕರ್‌ಗೆ ಸೂಚನೆ ನೀಡಿದರು.
ಕೆಆರ್‌ಐಡಿಎಲ್ ಅ ಧಿಕಾರಿಗೆ ತರಾಟೆ: ತಾಲೂಕಿನ ವ್ಯಾಪ್ತಿಯಲ್ಲಿ ನಾನಾ ಕಡೆಗಳಲ್ಲಿ ಕೆಆರ್‌ಐಡಿಎಲ್‌ನಿಂದ ನಡೆಯುತ್ತಿರುವ ಅಂಗನವಾಡಿ ಕಟ್ಟಡ, ರಸ್ತೆ, ಚರಂಡಿ, ಸಮುದಾಯ ಭವನ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ಹಲವು ವರ್ಷಗಳಿಂದ ಅರ್ಧಕ್ಕೆ ನಿಂತರೂ ಇಲಾಖೆ ಅ ಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸುವ ಪ್ರಯತ್ನ ಮಾಡುತ್ತಿಲ್ಲ. ಜನರು ನಮ್ಮನ್ನು ದೂರುತ್ತಿದ್ದಾರೆ ಎಂದು ಹಲಬರ್ಗಾ ಸದಸ್ಯ ಸುಧಾಕರ, ಮದಕಟ್ಟಿ ಸದಸ್ಯ ಲಿಂಗರಾಜ್ ಸೇರಿದಂತೆ ಮುಂತಾದರು ಆಕ್ರೋಶ ವ್ಯಕ್ತ ಪಡಿಸಿದರು. ಅಲ್ಲದೇ ಪ್ರತಿಸಲ ನಡೆಯುವ ಸಭೆಗೆ ಇಲಾಖೆಯ ಅಧಿ ಕಾರಿಗಳು ಗೈರಾಗುವ ಮೂಲಕ ಸದಸ್ಯರಿಗೆ ಅಗೌರವ ತೋರುತ್ತಿರುವ ಕೆಆರ್‌ಐಡಿಎಲ್ ಗೆ ಇನ್ಮುಂದೆ ಯಾವುದೇ ಕಾಮಗಾರಿ ನೀಡಬಾರದು ಎಂದು ತಿಳಿಸಿದರು.