Advertisement
ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಸೂಕ್ತ ವೇತನ ಶ್ರೇಣಿ ನಿಗದಿಪಡಿಸುವುದು, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದು, ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸುವುದು, ಈಗಾಗಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್ ತಿಂಗಳಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸುವುದು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆಯನ್ನು ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ನೇಮಿಸುವುದು, 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯಗುರುಗಳಿಗೆ ಬಡ್ತಿ ನೀಡುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಸೇವೆ ಸೌಲಭ್ಯಗಳನ್ನು ಒದಗಿಸಬೇಕು ಎನ್ನುವುದು ಶಿಕ್ಷಕರ ಪ್ರಮುಖ ಬೇಡಿಕೆಗಳಾಗಿವೆ. ಕೇಂದ್ರ ಸಂಘದ ಕಾರ್ಯಕಾರಣಿಯ ನಿರ್ದೇಶನದಂತೆ ಅಂದು ಬೆಳಗ್ಗೆ 9:30ಕ್ಕೆ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಲಿದೆ. ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಕಡ್ಡಾಯವಾಗಿ ಈ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
Advertisement
ಬೀದರನಲ್ಲಿ ನಾಡಿದ್ದು ಶಿಕ್ಷಕರ ಪ್ರತಿಭಟನಾ ರ್ಯಾಲಿ
11:55 AM Jul 07, 2019 | Naveen |
Advertisement
Udayavani is now on Telegram. Click here to join our channel and stay updated with the latest news.