Advertisement
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಸೂÅರಿನ ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಧಾಕೃಷ್ಣ ಶೆಟ್ಟಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಬೇಕಾದರೆ ಸಾಕಷ್ಟು ಸ್ಪರ್ಧೆಯನ್ನು ಎದುರಿಸಬೇಕಾಗಿದೆ. ಈ ಸ್ಪರ್ಧೆಯನ್ನು ಎದುರಿಸುವ ನಿಟ್ಟಿನಲ್ಲಿ ಸಾಕಷ್ಟು ವಿದ್ಯಾರ್ಹತೆ, ಕೌಶಲದ ಜತೆಗೆ ಪ್ರಸ್ತುತ ಜಗತ್ತಿನ ಕುರಿತು ಜ್ಞಾನ ಸಂಪಾದನೆಯು ಅತ್ಯಂತ ಅತ್ಯಗತ್ಯವಾಗಿರುತ್ತದೆ. ಈ ದಿಶೆಯಲ್ಲಿ ಕಠಿನ ಪರಿಶ್ರಮ, ಚುರುಕು ತನ, ಆಸಕ್ತಿ ಮತ್ತು ಆತ್ಮವಿಶ್ವಾಸಗಳನ್ನು ನಮ್ಮದಾಗಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಹೇಳಿದರು.
Related Articles
Advertisement
ಈ ಸಂದರ್ಭ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ| ಅರುಣಾಚಲ ಮಯ್ಯ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶು ಪಾಲ ಜಿ.ಎಂ. ಗೊಂಡ ವåತ್ತು ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಅರ್ಚನಾ ಅರವಿಂದ ಮತ್ತು ಸ್ಪರ್ಧಾ-17ರ ವಿದ್ಯಾರ್ಥಿ ಸಂಯೋಜಕ ವಿN°àಶ್ ಮತ್ತು ರಕ್ಷಿತ್ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಆಶ್ಲಿನ್ ಕಾರ್ಯಕ್ರಮ ನಿರ್ವಹಿಸಿದರು. ಮಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ಸುಮಾರು 18 ಕಾಲೇಜುಗಳು ಸ್ಪರ್ಧಾ- 17ರಲ್ಲಿ ಭಾಗವಹಿಸಿದ್ದವು.