Advertisement

ಬಿಎಸ್‌ವೈ ವಿರುದ್ಧ ವಿಚಾರಣೆಗೆ ಆದೇಶಿಸಿದ್ದ ಭಾರದ್ವಾಜ್‌

11:03 PM Mar 08, 2020 | Lakshmi GovindaRaj |

ಬೆಂಗಳೂರು: ಭಾನುವಾರ ನವದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದ ಹಂಸರಾಜ್‌ ಭಾರದ್ವಾಜ್‌(83) ಅವರು, 2009 ರಿಂದ 2014ರ ವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ರಾಮೇಶ್ವರ ಠಾಕೂರ್‌ ನಂತರ ರಾಜ್ಯದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಅವರು ರಾಜ್ಯ ಪಾಲರಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಕೇಂದ್ರದಲ್ಲಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ-2 ಸರ್ಕಾರ ಅಧಿಕಾರದಲ್ಲಿತ್ತು.

Advertisement

ಹಂಸರಾಜ್‌ ಭಾರದ್ವಾಜ್‌ ರಾಜ್ಯಪಾಲ ರಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತು ಅಂದಿನ ಲೋಕಾಯುಕ್ತರಾಗಿದ್ದ ಸಂತೋಷ್‌ ಹೆಗ್ಡೆ ರಾಜ್ಯ ಸರ್ಕಾರಕ್ಕೆ ವರದಿ ಕೊಟ್ಟಿದ್ದರು. ಅವರ ವರದಿ ಆಧಾರದ ಮೇಲೆ ಮುಖ್ಯಮಂತ್ರಿ ವಿರುದ್ಧ ವಿಚಾರಣೆಗೆ ಒಳಪಡಿಸಲು ಆಗ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅನುಮತಿ ನೀಡಿದ್ದರು.

ರಾಜ್ಯಪಾಲರು ತಮ್ಮ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಹಂಸರಾಜ್‌ ಭಾರದ್ವಾಜ್‌ ವಿರುದ್ಧ ಬಿಜೆಪಿ ಗೋಬ್ಯಾಕ್‌ ಚಳವಳಿ ನಡೆಸಿತ್ತು. ಅಲ್ಲದೇ, ಕಾಂಗ್ರೆಸ್‌ ಪಕ್ಷದ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಪ್ರತಿಭಟನೆ ನಡೆಸಿತ್ತು. 2014ರಲ್ಲಿ ಹಂಸರಾಜ್‌ ಭಾರದ್ವಾಜ್‌ ಅವಧಿ ಮುಗಿದ ನಂತರ ತಮಿಳುನಾಡು ರಾಜ್ಯಪಾಲರಾಗಿದ್ದ ಕೆ.ರೋಸಯ್ಯ ಅವರನ್ನು ಹಂಗಾಮಿ ರಾಜ್ಯಪಾಲರಾಗಿ ನೇಮಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next