Advertisement
ಇಲ್ಲಿನ ಬಸವೇಶ್ವರ ಸಮುದಾಯ ಭವನದಲ್ಲಿ ಭರಮಸಾಗರ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ನೂತನ ಮಂಡಲಾಧ್ಯಕ್ಷರ ಪದಗ್ರಹಣ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದ ಎಲ್ಲಾ ವರ್ಗದ ಜನರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರ್ಥವಾಗಿದೆ. ಆದರೆ ಈ ವಿಷಯದಲ್ಲಿ ವಿರೋಧ ಪಕ್ಷಗಳು ವಿನಾಕಾರಣ ಗೊಂದಲ ಸೃಷ್ಟಿಸುತ್ತಿವೆ ಎಂದು ದೂರಿದರು.
Related Articles
Advertisement
ಮೂರು ವರ್ಷಗಳ ಕಾಲ ಶಿವಣ್ಣ ಮಂಡಲಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಹೆಚ್ಚು ಮತಗಳಿಂದ ಈ ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಪಕ್ಷ ಗಟ್ಟಿಯಾಗಿ ಬೆಳೆಯಲು ಎಲ್ಲಾ ಹಂತದ ಚುನಾವಣೆಗಳನ್ನು ಗೆಲ್ಲಬೇಕು ಎಂದು ಹೇಳಿದರು. ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಮುರಳಿ ಯಾದವ್ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳು ಯುವಸಮೂಹದ ಆಶಾಕಿರಣಗಳಾಗಲಿ ಎಂದರು. ಬಿಜೆಪಿ ಮಂಡಲ್ ನೂತನ ಅಧ್ಯಕ್ಷ ಶೈಲೇಶ್ ಕುಮಾರ್ ಮಾತನಾಡಿ, ಪಕ್ಷದ ಸೇವಕನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. 20 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದೇನೆ. ಕಾರ್ಯಕರ್ತರ ಸಹಕಾರ ಪಡೆದು ಸರ್ಕಾರದ ಸೌಲಭ್ಯ ಸದುಪಯೋಗವಾಗುವಂತೆ ಮಾಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿಯ ಜಿಲ್ಲಾ ಮುಖಂಡರಾದ ಸುರೇಶ್, ಸಿದ್ದೇಶ್ ಯಾದವ್, ನಾಗರಾಜ್, ಶ್ರೀನಿವಾಸ್, ಹೊಳಲ್ಕೆರೆ ತಾಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ, ಜಿಪಂ ಸದಸ್ಯ ಡಿ.ವಿ. ಶರಣಪ್ಪ, ಕೋಗುಂಡೆ ವಿರೂಪಾಕ್ಷಪ್ಪ, ತಾಪಂ ಸದಸ್ಯರಾದ ಎನ್. ಕಲ್ಲೇಶ್, ಜಿ.ಬಿ. ಶೇಖರಪ್ಪ, ನಾಗೇಂದ್ರಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರತ್ನಮ್ಮ, ಚಿತ್ರದುರ್ಗ ಗ್ರಾಮಾಂತರ ಘಟಕದ ಅಧ್ಯಕ್ಷ ನಂದಿ ನಾಗರಾಜ್, ಸಿ.ಟಿ. ಮಹಾಂತೇಶ್, ಟಿಎಪಿಎಂಸಿ ಅಧ್ಯಕ್ಷ ಕೋಗುಂಡೆ ಮಂಜುನಾಥ್, ಕೊಳಹಾಳ್ ಶರಣಪ್ಪ, ಲೋಲಾಕ್ಷಮ್ಮ, ಎಚ್.ಎಂ.ದ್ಯಾಮಣ್ಣ, ನಾರಾಯಣ ರಾವ್ ಮೊದಲಾದವರು ಭಾಗವಹಿಸಿದ್ದರು.