ಭರಮಸಾಗರ: ಬರೋಬ್ಬರಿ 2.70 ಕೋಟಿ ರೂ. ವೆಚ್ಚದಲ್ಲಿ ಇಲ್ಲಿನ ವಿದ್ಯಾನಗರದಲ್ಲಿ 2013-14ನೇ ಸಾಲಿನಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡವನ್ನು ನಿರ್ಮಿಸಲಾಗಿದೆ. ಆದರೆ ಕಾಲೇಜಿಗೆ ಕಾಂಪೌಂಡ್ ಮರೀಚಿಕೆಯಾಗಿರುವುದರಿಂದ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಹಲವು ಸಮಸ್ಯೆ ಎದುರಿಸಬೇಕಾಗಿದೆ.
Advertisement
ಆರಂಭದಲ್ಲಿ ಹಳೆ ಪೊಲೀಸ್ ಠಾಣೆ ಹಾಗೂ ಇತರೆ ಸರ್ಕಾರಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಲ್ಲಿನ ಐಟಿಐ ಕಾಲೇಜಿಗೆ 2013-14ನೇ ಸಾಲಿನಲ್ಲಿ ನಬಾರ್ಡ್‌ನ ಆರ್ ಐಡಿಎಫ್ ಯೋಜನೆಯಡಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿತ್ತು. ಇಂತಹ ಸುಸಜ್ಜಿತ ಕಟ್ಟಡ ನಿರ್ಮಿಸಿದರೂ ಕಾಲೇಜು ಕಟ್ಟಡದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಿಲ್ಲ. ಇದರಿಂದಾಗಿ ಕಾಲೇಜಿನ ಸುತ್ತಲೂ ಅನೈರ್ಮಲ್ಯ ಸೃಷ್ಟಿಯಾಗಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
Related Articles
Advertisement
ಗ್ರಾಪಂಗೆ ತಾಂತ್ರಿಕ ಸಮಸ್ಯೆ ಅಡ್ಡಿಐಟಿಐ ಕಾಲೇಜು ಕಟ್ಟಡದ ಹಲವು ಭಾಗಗಳಿಗೆ ಕಿಡಿಗೇಡಿಗಳು ಹಾಳು ಮಾಡಿರುವ ಅನಾಹುತಗಳ ನಡುವೆಯೇ ಕಾಲೇಜು ಚಟುವಟಿಕೆಗಳು ನಡೆಯುತ್ತಿದೆ. ಮಹಿಳಾ ಪ್ರಶಿಕ್ಷಣಾರ್ಥಿಗಳು ಓದುವ ಕಾಲೇಜಿನಲ್ಲಿ ಕಟ್ಟಡದ ಸುರಕ್ಷತೆಗೆ ಬೇಕಾದ ಕಾಂಪೌಂಡ್ ಸೌಲಭ್ಯವಿಲ್ಲದೆ ನಿತ್ಯ ತೊಂದರೆ ಅನುಭವಿಸಬೇಕಾಗಿದೆ. ಕಟ್ಟಡದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ವರ್ಷಗಳೇ ಕಳೆದಿವೆ. ಆದರೆ ಕಾಂಪೌಂಡ್ ನಿರ್ಮಾಣ ಕಾರ್ಯಕ್ಕೆ ಅಗತ್ಯವಿರುವ ಜಾಬ್‌ಕಾರ್ಡ್‌ಗಳ ಜೋಡಣೆ ಸೇರಿದಂತೆ ತಾಂತ್ರಿಕ ಸಮಸ್ಯೆಯಿಂದ ಕಾಂಪೌಂಡ್ ಕಾಮಗಾರಿ ಟೇಕಾಪ್ ಆಗಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.