ಚಿಕ್ಕಮಗಳೂರು: ನಗರದ ಎಂ.ಜಿ ರಸ್ತೆಯಲ್ಲಿ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಈ ವೇಳೆ ಅಂಗಡಿಗಳ ಬಾಗಿಲು ಮುಚ್ಚುವಂತೆ ವರ್ತಕರಿಗೆ ಪ್ರತಿಭಟನಾಕಾರರು ಒತ್ತಾಯ ಮಾಡಿದ ಘಟನೆ ನಡೆದಿದೆ. ಬಂದ್ ವೇಳೆ ಅಂಗಡಿ ಬಾಗಿಲು ತೆರೆದಿದ್ದ ವರ್ತಕರ ಜೊತೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದ್ದಾರೆ.
ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ದೇಶದಾದ್ಯಂತ ‘ಭಾರತ್ ಬಂದ್’ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡಿಯುತ್ತಿದ್ದು, ನಗರದ ಹನುಮಂತಪ್ಪ ವೃತ್ತದಿಂದ ಅಜಾದ್ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಹೆಂಡತಿಯನ್ನು ಕತ್ತರಿಯಿಂದ ಇರಿದು ಕೊಂದು ಮೃತದೇಹದ ಬಳಿ ಕುಳಿತು ವಿಡಿಯೋ ಗೇಮ್ ಆಡಿದ ಪತಿರಾಯ
ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐಎಂಎಲ್, ಕನ್ನಡಪರ ಸಂಘಟನೆ, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ 16 ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಜಿಲ್ಲೆಯಲ್ಲಿ ಬಂದ್ ನ ಕಾವು ಹೆಚ್ಚಾಗಿದೆ.