ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯಲಿರುವ ಭಾರತ್ ಬಂದ್ ಗೆ ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟವೂ ಬೆಂಬಲ ನೀಡಿದ್ದು, ಒಂದು ದಿನದ ಮಟ್ಟಿಗೆ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
ರೈತ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ಕೂಡ ಬಂದ್ ಮಾಡಲು ನಿರ್ಧರಿಸಿದ್ದು, ಮಂಗಳವಾರ ಒಂದು ದಿನ ಆನ್ ಲೈನ್ ತರಗತಿಗಳು ನಡೆಯುವುದಿಲ್ಲ. ಆದರೆ ಆನ್ ಲೈನ್ ಪರೀಕ್ಷೆಗಳು ನಿಗದಿಯಾಗಿದ್ದರೆ ಅವುಗಳು ಮಾತ್ರ ನಡೆಯಲಿದೆ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದ್ದಾರೆ.
ಮಂಗಳವಾರದ ಭಾರತ್ ಬಂದ್ ಗೆ ದೇಶದ ಒಟ್ಟು 40 ರೈತ ಸಂಘಟನೆಗಳು ಕರೆ ನೀಡಿದೆ. ಕಾಂಗ್ರೆಸ್, ಟಿಎಂಸಿ ಸೇರಿ ಎಂಟು ಪ್ರಮುಖ ಪಕ್ಷಗಳು ಕೂಡಾ ಬೆಂಬಲ ಸೂಚಿಸಿದೆ.
ಇದನ್ನೂ ಓದಿ:ಮಾರಕ ಯೋಜನೆ ರದ್ದುಗೊಳಿಸದಿದ್ದರೆ ಚುನಾವಣೆ ಬಹಿಷ್ಕಾರಕ್ಕೆ ತೀರ್ಮಾನ
ರಾಜ್ಯದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಬಂದ್ ಗೆ ಕಾರ್ಮಿಕ ಸಂಘಟನೆಗಳ ಸಹಿತ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದೆ.