Advertisement
ಸಾಂಕೇತಿಕ ಪ್ರತಿಭಟನೆಭಾರತ್ ಬಂದ್ ಬೆಂಬಲಿಸಿ ರೈತ, ಕಾರ್ಮಿಕ, ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಮತ್ತು ರಾಷ್ಟ್ರೀಯ ಹೆದ್ದಾರಿ ಬಂದ್ ಹೋರಾಟ ಸೋಮವಾರ ಬೆಳಗ್ಗೆ ಬಂಟ್ವಾಳ ಬಿ.ಸಿ. ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಡೆಯಲಿದೆ.
Related Articles
Advertisement
ಇದನ್ನೂ ಓದಿ:65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್
ಬಸ್ ಸಂಚಾರ ಎಂದಿನಂತೆಯಾವ ಸಂಘಟನೆಯೂ ಜಿಲೆಯಲ್ಲಿ ಬಂದ್ ಆಚರಣೆಗೆ ಕರೆ ನೀಡಿಲ್ಲ. ಸರಕಾರಿ ಮತ್ತು ಖಾಸಗಿ ಬಸ್‌ಗಳು, ರಿಕ್ಷಾ, ಟ್ಯಾಕ್ಸಿ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿಲ್ಲ. ಹಾಗಾಗಿ ಸಾರ್ವಜನಿಕ ಸಾರಿಗೆ ವಾಹನಗಳು ಎಂದಿನಂತೆ ಕಾರ್ಯಾಚರಿಸಲಿವೆ. ಅಂಗಡಿ ಮುಂಗಟ್ಟುಗಳು, ಹೊಟೇಲ್‌ಗಳು, ಸರಕಾರಿ, ಖಾಸಗಿ ಕಚೇರಿಗಳು ಕಾರ್ಯಾಚರಿಸಲಿವೆ. “ರೈತರು ದೇಶದ ಬೆನ್ನೆಲುಬು. ಅವರಿಗೆ ನಮ್ಮ ನೈತಿಕ ಬೆಂಬಲ ಸದಾ ಇದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರ ನಿಲ್ಲಿಸುವುದಿಲ್ಲ ಎಂದು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ ಪ್ರತಿಕ್ರಿಯಿಸಿದ್ದಾರೆ. ಉಡುಪಿ: ಕೆಲ ಸಂಘಟನೆಗಳಿಂದ ಬೆಂಬಲ
ಉಡುಪಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಕೆಲ ರೈತ ಸಂಘಟನೆಗಳು ಸೆ. 27ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದು ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನ ಜಾಥ ಹಮ್ಮಿಕೊಂಡಿವೆ. ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದಿಂದ ಬಂದ್‌ಗೆ ಬೆಂಬಲವಿಲ್ಲ. ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂದು ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ. ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಸಮಾನ ಮನಸ್ಕ ಜನಪರ ಸಂಘಟನೆಗಳೊಂದಿಗೆ ಕೂಡಿಕೊಂಡು ಉಡುಪಿ, ಕುಂದಾಪುರ, ಬೈಂದೂರು, ಕಾರ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಉಡುಪಿಯಲ್ಲಿ ಜೋಡುಕಟ್ಟೆಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಕೆ. ಶಂಕರ್ ತಿಳಿಸಿದ್ದಾರೆ. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ, ಸಾಲಿಡಾರಿಟಿ ಯೂತ್ ಮೂಮೆಂಟ್ ಉಡುಪಿ ಜಿಲ್ಲಾ ಘಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ. ಕೆಎಸ್ಸಾರ್ಟಿಸಿ ಬಸ್‌ಗಳು ಎಂದಿನಂತೆ ಸಂಚಾರ ಮಾಡಲಿವೆ ಎಂದು ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ.