Advertisement

Bharat Jodo ನ್ಯಾಯ್‌ ಯಾತ್ರೆ ಸಮಾರೋಪ: ಸ್ಟಾಲಿನ್‌, ಅಖೀಲೇಶ್‌ ಭಾಗಿ

01:09 AM Mar 16, 2024 | Team Udayavani |

ಮುಂಬಯಿ:  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆ ಇದೇ ರವಿವಾರ ಮುಂಬಯಿಯಲ್ಲಿ ಸಂಪನ್ನವಾಗಲಿದೆ.

Advertisement

ಸಮಾರೋಪ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್‌ ಯಾದವ್‌, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಮಹಾರಾಷ್ಟ್ರ ವಿಧಾನಸಭೆಯ ವಿಪಕ್ಷ ನಾಯಕ ವಿಜಯ್‌ ವಡೆತ್ತಿವಾರ್‌ ತಿಳಿಸಿದ್ದಾರೆ.

ಮಾ.17ರಂದು ಮುಂಬಯಿಯ ದಾದರ್‌ನಲ್ಲಿರುವ ಶಿವಾಜಿ ಪಾರ್ಕ್‌ನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಆಪ್‌ನ ಪ್ರತಿನಿಧಿಗಳು ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಸಮಾರೋಪ ಸಮಾರಂಭಕ್ಕೂ ಮುನ್ನ ರಾಹುಲ್‌ ಗಾಂಧಿ ಅವರು ದಾದರ್‌ನಲ್ಲಿರುವ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಚೈತ್ಯ ಭೂಮಿಗೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ ಎಂದು ವಿಜಯ್‌ ವಡೆತ್ತಿವಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next