Advertisement

ನಾಳೆ ಭಾರತ ಬಂದ್‌ : ರಾಜ್ಯದ ರೈತ ಸಂಘಟನೆಗಳಿಂದ ಬೆಂಬಲ

01:54 AM Sep 26, 2021 | Team Udayavani |

ಬೆಂಗಳೂರು : ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಭಾರತ ಬಂದ್‌ಗೆ ಕರೆ ನೀಡಿದ್ದು, ರಾಜ್ಯದಲ್ಲಿ ರೈತ ಸಂಘಟನೆಗಳು, ಕಾರ್ಮಿಕ, ದಲಿತ, ಕನ್ನಡಪರ ಮತ್ತು ವಿದ್ಯಾರ್ಥಿ ಸಂಘಟನೆಗಳು ಬೆಂಬಲ ನೀಡಿವೆ. ವರ್ತಕರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ವರ್ತಕರ ಸಂಘಗಳು ಕೂಡ ಕೈ ಜೋಡಿಸಲಿವೆ.

Advertisement

ಬಂದ್‌ಗೆ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ನೈತಿಕ ಬೆಂಬಲ ಸೂಚಿಸಿವೆ. ಹೊಟೇಲ್‌ ಉದ್ಯಮ ಬೆಂಬಲ ಸೂಚಿಸಿಲ್ಲ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬಿಎಂಟಿಸಿ, ಮೆಟ್ರೋ ಸಂಚಾರ ಸಂಚಾರ ಇರುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ ಮಾಲಕರ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಹೀಗಾಗಿ ಸಂಚಾರ ಎಂದಿನಂತೆ ಇರಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next