Advertisement

ಬೀದರ್: ಕೇಂದ್ರದ ಕೃಷಿ ಕಾಯ್ದೆಗಳ ತಿದ್ದುಪಡಿ ರದ್ದತಿಗೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ ಗೆ ಗಡಿ ಜಿಲ್ಲೆ ಬೀದರ್ ನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಕೇವಲ ಸಂಘಟನೆಗಳ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದೆ.

Advertisement

ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ  ಆಚರಿಸಲಾಗುತ್ತಿರುವ ಬಂದ್ ನಿಂದ ದೈನಂದಿನ ಚಟುವಟಿಕೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಬಸ್, ವಾಹನಗಳ ಸಂಚಾರ ಎಂದಿನಂತಿದ್ದು, ಅಂಗಡಿ ಮುಗ್ಗಟ್ಟುಗಳು ತೆರೆದಿವೆ. ಆದರೂ ಜಿಲ್ಲೆಯಲ್ಲಿ  ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ:ಕುಖ್ಯಾತ ರೌಡಿಶೀಟರ್‌ ಕುಣಿಗಲ್‌ ಗಿರಿ ಬಂಧನ

ಪ್ರತಿಭಟನೆ ವೇಳೆ ಮಾತನಾಡಿದ ರೈತ ಸಂಘಟನೆಗಳ ಮುಖಂಡರು ಕೇದ್ರ ಸರ್ಕಾರದ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಿವೆ. ಕೂಡಲೇ ಕಾಯ್ದೆಗಳನ್ನು ವಾಪಸ್ ಪಡೆಯುವ ಮೂಲಕ  ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಬೀದರ್ ಜಿಲ್ಲಾ ರೈತ ಸಂಘ, ರೈತ ಮತ್ತು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next