Advertisement
ಅಖಿಲ ಭಾರತ ರೈತರ ಸಂಘರ್ಷ ಸಮನ್ವಯ ಸಮಿತಿಯು ಕರೆ ನೀಡಿರುವ ಈ ಭಾರತ್ ಬಂದ್ ಗೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟವು ಮಂಗಳವಾರ ಬೆಳಗ್ಗೆ 10ಕ್ಕೆ ಮಂಗಳೂರಿನ ನಂತೂರು ಸರ್ಕಲ್‌ನಲ್ಲಿ ರಾಸ್ತಾ ರೋಕೊ ಚಳವಳಿ ನಡೆಸುವ ಕುರಿತು ತೀರ್ಮಾನಿಸಿದೆ.
Related Articles
Advertisement
ಮಂಗಳವಾರದ ಭಾರತ್ ಬಂದ್ ಗೆ ದೇಶದ 40 ರೈತ ಸಂಘಟನೆಗಳು ಕರೆ ನೀಡಿದೆ. ಕಾಂಗ್ರೆಸ್, ಟಿಎಂಸಿ ಸೇರಿ ಎಂಟು ಪ್ರಮುಖ ಪಕ್ಷಗಳು ಕೂಡಾ ಬೆಂಬಲ ಸೂಚಿಸಿದೆ.
ರಾಜ್ಯದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಬಂದ್ ಗೆ ಕಾರ್ಮಿಕ ಸಂಘಟನೆಗಳ ಸಹಿತ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದೆ.