Advertisement

ಭಾರತ್ ಬಂದ್: ಚಿಕ್ಕಬಳ್ಳಾಪುರದಲ್ಲಿ ನೀರಸ ಪ್ರತಿಕ್ರಿಯೆ; ಎಡಪಕ್ಷಗಳ ಪ್ರತಿಭಟನೆ

01:03 PM Jan 08, 2020 | keerthan |

ಚಿಕ್ಕಬಳ್ಳಾಪುರ: ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ ಹಾಗೂ ಪ್ರತಿ ಕಾರ್ಮಿಕನಿಗೆ 21 ಸಾವಿರ ರೂ, ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ದೇಶವ್ಯಾಪಿ ವಿವಿಧ ಕಾರ್ಮಿಕ ಸಂಘಟನೆಗಳು ನೀಡಿರುವ ಅಖಿಲ ಭಾರತ ಮುಷ್ಕರಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ ಹಾಗೂ ಗೌರಿಬಿದನೂರು ತಾಲೂಕುಗಳಲ್ಲಿ ಪರಿಸ್ಥಿತಿ ಎಂದಿನಂತೆ ಇದ್ದು ವಾಹನ ಹಾಗೂ ಜನ ಸಂಚಾರ ಮಾಮೂಲಿಯಂತೆ ಇದ್ದು ಬಂದ್ ಛಾಯೆ ಇಲ್ಲವಾಗಿದೆ. ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಸಂಘಟನೆಯ ಮುಖಂಡರು ಮೆರವಣಿಗೆ ಮೂಲಕ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ಕೆಎಸ್ಆರ್ಟಿಸಿ, ಖಾಸಗಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾದ್ಯಂತ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದ್ದು, ಬಂದ್ ಆಚರಣೆಗೆ ಎಲ್ಲೂ ಅವಕಾಶ ನೀಡಿಲ್ಲ. ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಕಾರರಿಗೆ ಪೊಲೀಸರು ದಿಗ್ಬಂದನ ಹಾಕಿದ್ದು ಪ್ರತಿಭಟನಕಾರರು ಎಲ್ಲೂ ಕದಲದಂತೆ ಪೊಲೀಸರು ಕಾವಲು ಇದ್ದಾರೆ.

ಪ್ರತಿಭಟನೆಯಲ್ಲಿ ಎಡಪಕ್ಷಗಳ ಕಾರ್ಯಕರ್ತರು, ಬಿಸಿಯೂಟ, ಅಂಗನವಾಡಿ, ಆಶಾ, ಗ್ರಾಪಂ ನೌಕರರು, ಪ್ರಾಂತ ರೈತ ಸಂಘ, ಕೃಷಿಕೂಲಿಕಾರರು, ಎಸ್ಎಫ್ಐ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next