ಬೆಂಗಳೂರು: ಎರಡು ದಿನಗಳ ಕಾಲ ವಿಶ್ರಾಂತಿ ಪಡೆದಿದ್ದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ರಾಹುಲ್ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಕೂಡಾ ಸೇರ್ಪಡೆಯಾಗಿದ್ದಾರೆ.
ಪಾಂಡವಪುರ ತಾಲೂಕಿನಿಂದ ಬೆಳಗ್ಗೆ 6.30ಕ್ಕೆ ಪುನರಾರಂಭಗೊಂಡ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಂಡಿದ್ದು, ಸುಮಾರು 12 ನಿಮಿಷಗಳ ಕಾಲ ಹೆಜ್ಜೆಹಾಕಿದರು. ಇಂದಿನ ಯಾತ್ರೆಯು ಸಂಜೆ 7 ಗಂಟೆಗೆ ನಾಗಮಂಗಲ ತಾಲೂಕಿನಲ್ಲಿ ಅಂತ್ಯಗೊಳ್ಳಲಿದೆ.
ಪಾದಯಾತ್ರೆ ಬಳಿಕ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸಭೆ ನಡೆಯಲಿದೆ. ನಾಗಮಂಗಲ ತಾಲೂಕಿನ ಸರಕಾರಿ ಆಯುರ್ವೇದಿಕ್ ಆಸ್ಪತ್ರೆ ಎದುರಿನ ಮಡಕೆ ಹೊಸೂರು ಗೇಟ್ ಬಳಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಇದನ್ನೂ ಓದಿ:48 ಕೋಟಿ ರೂ.ಗೆ ಅಪಾರ್ಟ್‌ಮೆಂಟ್ ಖರೀದಿಸಿದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್
ಭಾರತ್ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಗಿತ್ತು. ಕಳೆದ ಶುಕ್ರವಾರ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳ ಗಡಿಯಲ್ಲಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮೂಲಕ ರಾಜ್ಯವನ್ನು ಪ್ರವೇಶಿಸಿದಾಗ ಕರ್ನಾಟಕಕ್ಕೆ ಪ್ರವೇಶಿಸಿತು.
ಯಾತ್ರೆಯು ಕರ್ನಾಟಕದಲ್ಲಿ 21 ದಿನಗಳ ಕಾಲ ಸಂಚರಿಸಲಿದ್ದು, ಒಟ್ಟು 511 ಕಿ.ಮೀ. ಯಾತ್ರೆ ನಡೆಯಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳನ್ನು ದಾಟಿ ಸಾಗಲಿದೆ.