Advertisement

ಸಿಎಂ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್‌

06:00 AM Jun 06, 2018 | Team Udayavani |

ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಮಂಗಳವಾರ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈಸೂರಿನಲ್ಲಿ ಸಾಹಸಸಿಂಹ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ಕುರಿತಂತೆ ಸಮಾಲೋಚನೆ ನಡೆಸಿದರು.

Advertisement

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್‌, ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ನೀಡಿದ ಭೂಮಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮಧ್ಯೆ
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಿಸಲು ತಾವು ಉದ್ದೇಶಿಸಿದ್ದು, ಸರ್ಕಾರದಿಂದ ಅಗತ್ಯ ನೆರವು ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ವಿಷ್ಣುವರ್ಧನ್‌ ಅವರ ಬಗ್ಗೆ ಅಪಾರ ಗೌರವ ಇದೆ. ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ. ಆದರೆ, ಈಗ ತಾನೇ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆ, ಖಾತೆಗಳ ಹಂಚಿಕೆ ಮುಂತಾದ ಕೆಲಸಗಳು ಬಾಕಿ ಇವೆ. ಇದು ಮುಗಿದ ಬಳಿಕ ಮತ್ತೂಮ್ಮೆ ಈ ಕುರಿತು ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next