Advertisement

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ

11:16 AM Feb 15, 2022 | Team Udayavani |

ಬೆಂಗಳೂರು : ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ಅವರು ಸೋಮವಾರ ಸಂಜೆ 7:30ಕ್ಕೆ ನಿಧನರಾದರು.

Advertisement

ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್‌ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ, ಪ್ರೊಫೆಸರ್‌ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ.

ರಂಗಭೂಮಿಯಲ್ಲಿ ‘ಮೇಕಪ್‌ ನಾಣಿ’ ಎಂದೇ ಹೆಸರಾಗಿದ್ದ ಬೆಳವಾಡಿ ನಂಜುಡಯ್ಯ ನಾರಾಯಣ ಅವರು ಭಾರ್ಗವಿ ಅವರ ಪತಿ. ದಂಪತಿಗೆ ನಟರಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ ಸೇರಿ ನಾಲ್ವರು ಮಕ್ಕಳು.

Advertisement

ಭಾರ್ಗವಿ ಅವರು ಬಿಎಸ್ಸಿ ಮತ್ತು ಇಂಗ್ಲಿಷ್‌ ಎಂಎ ಸ್ನಾತಕೋತ್ತರ ಪದವಿ ಪಡೆದಿದ್ದರು. ಅವರು ‘ನಾ ಕಂಡ ನಮ್ಮವರು’ ಕೃತಿ ರಚಿಸಿದ್ದರು.

Koo App

ಹಿರಿಯ ನಟಿ, ರಂಗಭೂಮಿ ಕಲಾವಿದೆ ಶ್ರೀಮತಿ ಭಾರ್ಗವಿ ನಾರಾಯಣ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಹಾಗೂ ಕಿರುತರೆಗೆ ತುಂಬಲಾರದ ನಷ್ಟವಾಗಿದೆ. ತಮ್ಮ ಸಹಜ ಅಭಿನಯದಿಂದ ಕನ್ನಡಿಗರ ಪಾಲಿನ ಪ್ರೀತಿಯ ಅಜ್ಜಿಯಾಗಿದ್ದ ಶ್ರೀಮತಿ ಭಾರ್ಗವಿ ನಾರಾಯಣ್ ಅವರು ಟಿ.ಎನ್.ಸೀತಾರಾಮ್ ಅವರ ಮುಕ್ತ ಧಾರಾವಾಹಿಯಲ್ಲಿ ಅಜ್ಜಿ ಪಾತ್ರದ ಮೂಲಕ ಮನೆ ಮಾತಾಗಿದ್ದರು. (1/2)

Dr. Sudhakar K (@drsudhakark.official) 14 Feb 2022

ಇದನ್ನೂ ಓದಿ : ಹಿಜಾಬ್‌ ವಿವಾದದ ವೀಡಿಯೋ ಕುರಿತು ಮಂಗಳೂರು ಪೊಲೀಸ್‌ ಆಯುಕ್ತರಿಂದ ಸ್ಪಷ್ಟನೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next