Advertisement

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

12:20 PM Mar 19, 2024 | Team Udayavani |

ನಟ ಕಿರಣ್‌ ರಾಜ್‌ ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ಧ್ ನಿರ್ದೇಶನದ “ಭರ್ಜರಿ ಗಂಡು’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಆನಂದ್‌ ಆಡಿಯೋ ಮೂಲಕ ಬಿಡುಗಡೆ ಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.

Advertisement

ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಸಿದ್ಧ್, “ರತ್ನ ಮಂಜರಿ ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ನನ್ನ ಸ್ನೇಹಿತ ಛಾಯಾಗ್ರಾಹಕ ಕಿಟ್ಟಿ ಕೌಶಿಕ್‌ ಅವರು, ನಾಯಕ ಕಿರಣ್‌ ರಾಜ್‌ ಸೇರಿದಂತೆ ಸಾಕಷ್ಟು ಜನ ಕಲಾವಿದರನ್ನು ಈ ಚಿತ್ರಕ್ಕಾಗಿ ನನಗೆ ಪರಿಚಯಿಸಿದರು. ಚಾಕಲೇಟ್‌ ಬಾಯ್‌ ಆಗಿದ್ದ  ಕಿರಣ್‌ ರಾಜ್, ಈ ಚಿತ್ರದ ಮೂಲಕ ಆಕ್ಷನ್‌ ಹೀರೋ  ಆಗುವುದಂತು ಖಚಿತ.  ಅಷ್ಟು ಅದ್ಭುತವಾಗಿ ಸಾಹಸವನ್ನು ಮಾಡಿದ್ದಾರೆ. ಭರ್ಜರಿ ಗಂಡು ಗ್ರಾಮೀಣ ಸೊಗಡಿನ ಕಥೆ. ಬರೀ ಪ್ರೀತಿಗಷ್ಟೇ ಸೀಮಿತವಾಗದ ನಾಯಕ, ತನ್ನ ಊರಿಗೆ ಹಾಗೂ ಊರ ಜನರಿಗೆ ಏನೆಲ್ಲಾ ಮಾಡುತ್ತಾನೆ ಎಂಬುದೆ ಕಥಾಹಂದರ. ಏಪ್ರಿಲ್‌ 5 ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು.

“ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು. ಪ್ರಸಿದ್ಧ್ ಅವರು ಬರೆದಿರುವ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಂಡಿದ್ದೇನೆ’ ಎಂದರು ನಾಯಕ ಕಿರಣ್‌ ರಾಜ್‌. ನಾಯಕಿ ಯಶ ಶಿವಕುಮಾರ್‌ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಕಲಾವಿದರಾದ ರಾಕೇಶ್‌ ರಾಜ್, ರೋಹಿತ್‌ ನಾಗೇಶ್‌ , ಸೌರಭ್‌ ಕುಲಕರ್ಣಿ, ಛಾಯಾಗ್ರಾಹಕ ಕಿಟ್ಟಿ ಕೌಶಿಕ್‌, ಸಂಗೀತ ನಿರ್ದೇಶಕ ಗುಮ್ಮೆನೇನಿ ವಿಜಯ್‌ ಚಿತ್ರದ ಕುರಿತು ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next