Advertisement
ಬಳಿಕ ಮಾತನಾಡಿದ ಅವರು, ನಾನು ಬಿಜೆಪಿಗೆ ಹೆಚ್ಚಿನ ಕೊಡುಗೆ ನೀಡಬಹುದು ಎಂದು ಭಾವಿಸುತ್ತೇನೆ. ಬಿಜೆಪಿಯು ದೇಶವ್ಯಾಪಿ ಸಂಘಟನೆ ಹೊಂದಿರುವ ಪಕ್ಷ. ಪ್ರಧಾನಿ ಮೋದಿಯವರ ದೂರದೃಷ್ಟಿ ನನ್ನನ್ನು ಪಕ್ಷಕ್ಕೆ ಸೇರಲು ಪ್ರೇರೇಪಿಸಿತು. ಆಪ್ ದೊಡ್ಡದಾಗಿ ಬೆಳೆಯಲ್ಲ. ಅವರು ಒಂದು ಕೂಟದ ಕೈಯಲ್ಲಿದ್ದಾರೆ, ಅವರ ಇಬ್ಬರು ಮಂತ್ರಿಗಳು ಜೈಲಿನಲ್ಲಿರುವುದು ನಾಚಿಕೆಗೇಡಿನ ಸಂಗತಿ. ಪಕ್ಷದಲ್ಲಿ ಸ್ಪಷ್ಟತೆ ಇಲ್ಲ ಎಂದರು.
Related Articles
Advertisement
ರಾಜ್ಯ ಚುನಾವಣ ಸಹ ಉಸ್ತುವಾರಿ, ನಿವೃತ್ತ ಐಪಿಎಸ್ ಕೆ. ಅಣ್ಣಾಮಲೈ ಅವರು ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ ಹಿಂದೆ ಮಹತ್ವದ ಪಾತ್ರ ವಹಿಸಿದ್ದಾರೆಂದು ಹೇಳಲಾಗಿದೆ.
ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅಣ್ಣಾಮಲೈ ಜತೆ ಭಾಸ್ಕರ್ ರಾವ್ ಚರ್ಚೆ ನಡೆಸಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಂಘ-ಪರಿವಾರದ ಹಿರಿಯರನ್ನು ಈ ಹಿಂದೆಯೇ ಅವರು ಭೇಟಿ ಮಾಡಿದ್ದರು ಎನ್ನಲಾಗಿದೆ.