Advertisement

ನಳಿನ್ ಕಟೀಲ್ ಸಮ್ಮುಖದಲ್ಲಿ ಕಮಲ ಪಾಳಯ ಸೇರಿದ ಭಾಸ್ಕರ್ ರಾವ್

12:24 PM Mar 01, 2023 | Team Udayavani |

ಬೆಂಗಳೂರು: ಆಮ್‌ ಆದ್ಮಿ ಪಕ್ಷದಲ್ಲಿದ್ದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಬುಧವಾರ ಅಧಿಕೃತವಾಗಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.

Advertisement

ಬಳಿಕ ಮಾತನಾಡಿದ ಅವರು, ನಾನು ಬಿಜೆಪಿಗೆ ಹೆಚ್ಚಿನ ಕೊಡುಗೆ ನೀಡಬಹುದು ಎಂದು ಭಾವಿಸುತ್ತೇನೆ. ಬಿಜೆಪಿಯು ದೇಶವ್ಯಾಪಿ ಸಂಘಟನೆ ಹೊಂದಿರುವ ಪಕ್ಷ. ಪ್ರಧಾನಿ ಮೋದಿಯವರ ದೂರದೃಷ್ಟಿ ನನ್ನನ್ನು ಪಕ್ಷಕ್ಕೆ ಸೇರಲು ಪ್ರೇರೇಪಿಸಿತು. ಆಪ್ ದೊಡ್ಡದಾಗಿ ಬೆಳೆಯಲ್ಲ. ಅವರು ಒಂದು ಕೂಟದ ಕೈಯಲ್ಲಿದ್ದಾರೆ, ಅವರ ಇಬ್ಬರು ಮಂತ್ರಿಗಳು ಜೈಲಿನಲ್ಲಿರುವುದು ನಾಚಿಕೆಗೇಡಿನ ಸಂಗತಿ. ಪಕ್ಷದಲ್ಲಿ ಸ್ಪಷ್ಟತೆ ಇಲ್ಲ ಎಂದರು.

ಇದನ್ನೂ ಓದಿ:ಮುಕೇಶ್ ಅಂಬಾನಿ ಮತ್ತು ಕುಟುಂಬಕ್ಕೆ ದೇಶ, ವಿದೇಶದಲ್ಲೂ ಝಡ್ ಪ್ಲಸ್ ಭದ್ರತೆ ನೀಡಿ: ಸುಪ್ರೀಂ

ಪೃಥ್ವಿ ರೆಡ್ಡಿ ಆಪ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದ ಬಳಿಕ ಪಕ್ಷದ ಚಟುವಟಿಕೆಗಳಿಂದ ತುಸು ದೂರವಾಗಿದ್ದ ಭಾಸ್ಕರ್‌ ರಾವ್‌, ಚುನಾವಣ ಹೊಸ್ತಿಲಲ್ಲಿ ಬಿಜೆಪಿ ಸೇರುತ್ತಿದ್ದಾರೆ.

Advertisement

ರಾಜ್ಯ ಚುನಾವಣ ಸಹ ಉಸ್ತುವಾರಿ, ನಿವೃತ್ತ ಐಪಿಎಸ್‌ ಕೆ. ಅಣ್ಣಾಮಲೈ ಅವರು ಭಾಸ್ಕರ್‌ ರಾವ್‌ ಬಿಜೆಪಿ ಸೇರ್ಪಡೆ ಹಿಂದೆ ಮಹತ್ವದ ಪಾತ್ರ ವಹಿಸಿದ್ದಾರೆಂದು ಹೇಳಲಾಗಿದೆ.

ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಅಣ್ಣಾಮಲೈ ಜತೆ ಭಾಸ್ಕರ್‌ ರಾವ್‌ ಚರ್ಚೆ ನಡೆಸಿದ್ದಾರೆ. ಕಂದಾಯ ಸಚಿವ ಆರ್‌. ಅಶೋಕ್‌ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಂಘ-ಪರಿವಾರದ ಹಿರಿಯರನ್ನು ಈ ಹಿಂದೆಯೇ ಅವರು ಭೇಟಿ ಮಾಡಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next