Advertisement

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಅಂತಿಮ ತೀರ್ಪು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ

12:20 PM Jun 08, 2021 | Team Udayavani |

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು  ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ.

Advertisement

ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ್ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ.

ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ  ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

2016 ರ ಜುಲೈನಲ್ಲಿ ಪತಿಯನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣ ಇಡೀ ಕರಾವಳಿಗರನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಇದೀಗ ಕೊಲೆ ನಡೆದು 5 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಬೇಕಿದೆ.

ಘಟನೆ ಹಿನ್ನಲೆ: ಉದ್ಯಮಿ ಭಾಸ್ಕರ್ ಶೆಟ್ಟಿ 2016 ರ ಜುಲೈ 28 ರಂದು ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಮಣಿಪಾಲ ಪೊಲೀಸರು ಅವರ ಪತ್ನಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಭಾಸ್ಕರ್ ಶೆಟ್ಟಿ ಕೊಲೆ ವಿಚಾರ ಬಹಿರಂಗಗೊಂಡಿತ್ತು. ಇದೀಗ ಉಡುಪಿ ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿ ತೀರ್ಪು ನೀಡಿದೆ.

Advertisement

ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next