Advertisement
ಮೃತ ಭಾಸ್ಕರ ಶೆಟ್ಟಿ ಅವರ ತಾಯಿ ಗುಲಾಬಿ ಶೆಡ್ತಿ ಅವರ ಕೋರಿಕೆಯಂತೆ ಸರಕಾರವು ಉಡುಪಿಯ ಎಂ. ಶಾಂತಾರಾಮ ಶೆಟ್ಟಿ ಅವರನ್ನು ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಕ ಮಾಡಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನೇಮಕಕ್ಕೆ ತಡೆಯಾಜ್ಞೆೆ ನೀಡಿತ್ತು. ಇದನ್ನು ಪ್ರಶ್ನಿಸಿ ಶಾಂತಾರಾಮ್ ಶೆಟ್ಟಿ ಅವರ ಪರ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿ ಷರತ್ತು ವಿಧಿಸಿ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿತ್ತು.
ಶುಕ್ರವಾರ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ವಿಚಾರಣಾ ಪ್ರಕ್ರಿಯೆಯನ್ನು ನಡೆಸಿದ್ದು, ಫೆ. 23ಕ್ಕೆ ಮುಂದಿನ ವಿಚಾರಣೆ ದಿನಾಂಕವನ್ನು ನಿಗದಿಪಡಿಸಿದ್ದಾರೆ. ಬೆಂಗಳೂರಿನ ಜೈಲಿನಲ್ಲಿರುವ ಮೂವರು ಪ್ರಮುಖ ಆರೋಪಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಉಳಿದಂತೆ ಸಾಕ್ಷ್ಯ ನಾಶದ ಆರೋಪಿಗಳಿಬ್ಬರು ಉಡುಪಿ ನ್ಯಾಯಾಲಯಕ್ಕೆ ಖುದ್ದು ಹಾಜ ರಾಗಿದ್ದರು. ಹೈಕೋರ್ಟ್ ನೀಡಿದ್ದ ತೀರ್ಪಿನ ಪ್ರತಿಯನ್ನು ಎಂ. ಶಾಂತಾ ರಾಮ್ ಶೆಟ್ಟಿ ನ್ಯಾಯಾಧೀಶರಿಗೆ ಸಲ್ಲಿಸಿ ದರು. ಹಿರಿಯ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ಉಪಸ್ಥಿತರಿದ್ದರು.