Advertisement

Bhatkal; ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯಶಿಕ್ಷಕನ ವಿರುದ್ದ ದೂರು ದಾಖಲು

10:18 PM Nov 18, 2023 | Team Udayavani |

ಭಟ್ಕಳ: ವಿದ್ಯಾರ್ಥಿನಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನ ವಿರುದ್ದ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ನಗರ ಠಾಣೆಯ ವ್ಯಾಪ್ತಿಗೊಳಪಡುವ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶ್ರೀಧರ ನಾರಾಯಣ ನಾಯ್ಕ ಕುಮಟಾ ಎಂಬಾತ ಕಳೆದ ಕೆಲವು ದಿನಗಳಿಂದ ತನ್ನದೇ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಅನುತ್ತೀರ್ಣ ಮಾಡುವ ಬೆದರಿಕೆ ಹಾಕುತ್ತಿದ್ದನು ಎಂದು ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ನಗರ ಠಾಣೆಯ ಪಿಎಸ್ಐ ಶಿವಾನಂದ ನಾವದಗಿ ಆರೋಪಿ ಮುಖ್ಯಶಿಕ್ಷಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next