Advertisement

ಭಟ್ಕಳ : ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ : ಪೊಲೀಸರಿಂದ ಇಬ್ಬರ ಬಂಧನ

08:18 PM May 26, 2022 | Team Udayavani |

ಭಟ್ಕಳ : ಕಳೆದ ಮೇ.24ರಂದು ತಾಲೂಕಿನ ತಲಾನ್ ಗುಡ್ಡದ ಮೇಲೆ ಅನುಮಾನಾಸ್ಪದವಾಗಿ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ದೊರೆತ ಮಹಿಳೆಯ ಕೊಲೆಗಾರರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವೀಯಾಗಿದ್ದು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Advertisement

ಆರೋಪಿಗಳನ್ನು ಸಾಗರದ ಕಟ್ಟಿನಕಾರ ನಿವಾಸಿ ನಾಗಪ್ಪ ತಂದೆ ನಾರಾಯಣ ನಾಯ್ಕ ಹಾಗೂ ತಲಾಂದ ನಿವಾಸಿ ಮಾಸ್ತಪ್ಪ ತಂದೆ ಮಂಜಪ್ಪ ನಾಯ್ಕ ಎಂದು ಗುರುತಿಸಲಾಗಿದೆ.

ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಅರೋಪಿಗಳನ್ನು ಪತ್ತೆ ಮಾಡಲಾಗಿದ್ದು ಮಹಿಳೆಯ ಗುರುತು ಪರಿಚಯ ಮಾತ್ರ ಪತ್ತೆಯಾಗಿಲ್ಲ ಎನ್ನಲಾಗಿದೆ.

ಘಟನೆ ವಿವರ : ಮೇ.21ರಂದು ರಾತ್ರಿ 7.30ರ ಸುಮಾರಿಗೆ ಮಾಸ್ತಪ್ಪ ಮಂಜಪ್ಪ ನಾಯ್ಕ ಇವರ ಮನೆಗೆ ಆತನ ಅಣ್ಣನ ಮಗ ನಾಗಪ್ಪ ನಾರಾಯಣ ನಾಯ್ಕ ಬಾಡಿಗೆ ರಿಕ್ಷಾ ಒಂದರಲ್ಲಿ ಓರ್ವ ಮಹಿಳೆಯನ್ನು ಕರೆದುಕೊಂಡು ಬಂದಿದ್ದು ಯವುದೋ ಉದ್ದೇಶಕ್ಕೆ ರಾತ್ರಿ ಆಕೆಯನ್ನು ಕೊಲೆ ಮಾಡಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಇಬ್ಬರೂ ಸೇರಿ ಬೆಳಗಾಗುವುದರೊಳಗಾಗಿ ಮಹಿಳೆಯ ಶವವನ್ನು ಹತ್ತಿರದ ಮಣ್ಣಿನ ಗುಡ್ಡದ ಮೇಲೆ ಎಸೆದಿದ್ದಾರೆ.

ಬಾಬ್ತು ತಲಾಂದ ಗ್ರಾಮದ ಕೊಲ್ಲಿಮುಲ್ಲೆ ನಿವಾಸಿ ಗಣಪತಿ ರಾಮಚಂದ್ರ ನಾಯ್ಕ ಎನ್ನುವವರು ಮೇ.24ರಂದು ಬೆಳಿಗ್ಗೆ ಆ ಭಾಗದಲ್ಲಿ ಹೋಗುತ್ತಿದ್ದಾಗ ವಾಸನೆ ಬರುತ್ತಿರುವುದರಿಂದ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನು ಕಂಡ ಅವರು ಗ್ರಾಮೀಣ ಠಾಣೆಗೆ ದೂರು ನೀಡಿದ್ದರು.

Advertisement

ಇದನ್ನೂ ಓದಿ : ಭಾರತದ ಅತಿದೊಡ್ಡ ಡ್ರೋನ್‌ ಫೆಸ್ಟಿವಲ್‌ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ

ದೂರನ್ನು ಆಧರಿಸಿ ತನಿಖೆಗೆ ಇಳಿದ ಪೊಲೀಸರು ಇಬ್ಬರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಗ್ರಾಮೀಣ ಸರ್ಕಲ್ ಇನ್ಸಪೆಕ್ಟರ್ ಮಹಾಬಲೇಶ್ವರ ಎಸ್.ಎನ್., ಪಿ.ಎಸ್.ಐ. ಭರತಕುಮಾರ್ ವಿ., ರತ್ನಾ ಎಸ್.ಕೆ., ಸಿಬ್ಬಂದಿಗಳಾದ ವಿನಾಯಕ ಪಾಟೀಲ, ಮಂಜುನಾಥ ಗೊಂಡ, ದೀಪಕ್ ಎಸ್. ನಾಯ್ಕ, ಮಹೇಶ ಪಟಗಾರ, ರಾಜು ಗೌಡ, ವಿನಾಯಕ ನಾಯ್ಕ, ರೇಣುಕಾ ಹೊನ್ನಿಕೋಳ, ಪ್ರೊಬೆಷನರಿ ಸಬ್ ಇನ್ಸಪೆಕ್ಟರ್ ಸುನಿಲ್ ಬಿ.ವೈ., ಮಂಜುನಾಥ ಪಾಟೀಲ್ ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸುಮನ್ ಪನ್ನೇಕರ್, ಹೆಚ್ಚುವರಿ ಎಸ್.ಪಿ. ಬದರೀನಾಥ, ಡಿ.ವೈ.ಎಸ್.ಪಿ. ಕೆ.ಯು. ಬೆಳ್ಳಿಯಪ್ಪ ತನಿಖೆಗೆ ಮಾರ್ಗದರ್ಶನ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next