Advertisement

ದೀದಿ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ

08:33 AM Oct 03, 2021 | Team Udayavani |

ಕೋಲ್ಕತ್ತಾ: ಭವಾನಿಪುರದಲ್ಲಿ ದೀದಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದ ಆರಂಭವಾಗಿದೆ.

Advertisement

ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ. ಬೆಳಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು,  ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್​​ ವಿಂಗ್​​​ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದಾರೆ.

ಸಿಎಂ ಮಮತಾಗೆ ‘ಮಾಡು ಇಲ್ಲವೇ ಮಡಿ’ ಪರಿಸ್ಥಿತಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. 2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next