Advertisement

ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

09:41 PM Sep 28, 2021 | Team Udayavani |

ಕೋಲ್ಕತಾ/ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರ ಭವಿಷ್ಯ ನಿರ್ಧರಿಸಲಿರುವ ಭವಾನಿಪುರದಲ್ಲಿ ಸೆ.30ರಂದು ನಡೆಯಲಿರುವ ಉಪ- ಚುನಾವಣೆಗೆ ಕಲ್ಕತ್ತಾ ಹೈಕೋರ್ಟ್‌ ಹಸಿರು ನಿಶಾನೆ ತೋರಿಸಿದೆ.

Advertisement

ಪಶ್ಚಿಮ ಬಂಗಾಳ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಚ್‌.ಕೆ. ದ್ವಿವೇದಿಯವರು, ಉಪಚುನಾವಣೆಯನ್ನು ಬೇಗನೇ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬರೆದಿದ್ದ ಹಿನ್ನೆಲೆಯಲ್ಲಿ ಆಯೋಗವು ಚುನಾವಣೆ ಘೋಷಣೆ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಮನವಿ ಮೇರೆಗೆ ಚುನಾವಣೆ ನಿಗದಿಯಾಗಿದ್ದರಿಂದ ಆಯೋಗದ ಕ್ರಮವನ್ನು ರದ್ದುಗೊಳಿಸಬೇಕೆಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಪೀಠ ಸೆ.30ರಂದು ಚುನಾವಣೆ ನಡೆಸಲು ಸೆ.4ರಂದೇ ಪ್ರಕಟಣೆ ಹೊರಡಿಸಿದೆ. ಈ ಹಂತದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ. ಇದೇ ವೇಳೆ, ಸರ್ಕಾರಿ ಅಧಿಕಾರಿಯಾಗಿರುವ ಮುಖ್ಯ ಕಾರ್ಯದರ್ಶಿ ಸಾರ್ವಜನಿಕ ಸೇವೆ ಮಾಡುವುದನ್ನು ಬಿಟ್ಟು ಅಧಿಕಾರದಲ್ಲಿರುವ ರಾಜಕೀಯ ಪಕ್ಷದ ಕಾರ್ಯಕರ್ತನಂತೆ ವರ್ತಿಸಿರುವುದು ತಪ್ಪು ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ನೇತೃತ್ವದ ನ್ಯಾಯಪೀಠ ಆಕ್ಷೇಪಿಸಿದೆ.

ಇದನ್ನೂ ಓದಿ:ಆರ್ಥಿಕ ಸಮಾನತೆಯಿಂದ ಮತಾಂತರ ತಡೆ ಸಾಧ್ಯ: ಪೇಜಾವರ ಸ್ವಾಮೀಜಿ

Advertisement

ಆಯೋಗಕ್ಕೆ ಮನವಿ:
ಈ ನಡುವೆ, ಕೇಂದ್ರ ಸಚಿವರಾದ ಅನುರಾಗ್‌ ಠಾಕೂರ್‌, ಎಂ.ಎ.ನಖ್ವಿ ನೇತೃತ್ವದ ಬಿಜೆಪಿ ನಿಯೋಗ ನವದೆಹಲಿಯಲ್ಲಿ ಚುನಾವಣಾ ಆಯೋಗಕ್ಕೆ ತೆರಳಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅವಕಾಶ ನೀಡುವಂತೆ ಮನವಿ ಮಾಡಿದೆ. ಬಿಜೆಪಿ ಮುಖಂಡರು ಸೆಕ್ಷನ್‌ 144ರ ಅನ್ವಯ ಸೆ.30ರ ವರೆಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.

ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಿದ್ದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಕ್ಯಾಪ್ಶನ್‌: ನವದೆಹಲಿಯಲ್ಲಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಕೇಂದ್ರ ಸಚಿವರಾದ ಅನುರಾಗ್‌ ಠಾಕೂರ್‌, ಎಂ.ಎ.ನಖ್ವಿ .

Advertisement

Udayavani is now on Telegram. Click here to join our channel and stay updated with the latest news.

Next