Advertisement
ಅಂಬೇಡ್ಕರ್ ಜಯಂತುತ್ಸವ ಸಮಿತಿ ವತಿಯಿಂದ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಎಲ್ಲಾ ಕಡೆಗಳಲ್ಲಿ ಧ್ವಜಗಳು ರಾರಾಜಿಸುತ್ತಿದ್ದವು. ಪ್ರಮುಖ ಬೀದಿಗಳಲ್ಲಿ ತಂಡ-ತಂಡವಾಗಿ ಅಂಬೇಡ್ಕರ್ ಭಾವಚಿತ್ರವನ್ನು ವಾಹನದಲ್ಲಿ ಇರಿಸಿ ಮೆರವಣಿಗೆ ಮಾಡಲಾಯಿತು.
ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಭಗತ್‌ಸಿಂಗ್ ವೃತ್ತ, ಗವಾನ್ ಚೌಕ್, ಚೌಬಾರಾ, ನೌಬಾದ ಮುಂತಾದ ಕಡೆಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆ ನಡೆಯುತ್ತಿದ್ದ ರಸ್ತೆಗಳ ಸಂಚಾರ ಬಂದ್ ಮಾಡಲಾಗಿತ್ತು. ಸಂಚಾರಿ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ, ಕ್ರೀಡಾ ಸಚುವ ರಹೀಮ್ ಖಾನ್, ಜಿಲ್ಲಾ ಧಿಕಾರಿ ಡಾ|ಎಚ್. ಆರ್. ಮಹಾದೇವ, ಜಿಪಂ ಸಿಇಒ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಟಿ.ಶ್ರೀಧರ್, ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದ ಅರಳಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಆನಂದ ದೇವಪ್ಪ, ರಹೀದಾಸ್ ಗೊಡೆ, ಫರ್ನಾಡಿಸ್ ಹಿಪ್ಪಳಗಾಂವ್, ಸಂಜಯ ಜಾಗಿರದಾರ್, ರಾಜು ಕಡ್ಯಾಳ್, ಬಸವರಾಜ ಪವಾರ, ಮಾರುತಿ
ಬೌದ್ಧೆ, ಅಶೋಕ ಕುಮಾರ ಕರಂಜಿ, ಶಿವರಾಜ ಕುದರೆ, ಪಂಡಿತ ಚಿದ್ರಿ, ವಿಜಯಕುಮಾರ ಸೋನಾರೆ ಸೇರಿದಂತೆ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.