Advertisement

ಬಯೋಮೆಟ್ರಿಕ್‌ ಅಳವಡಿಸಿ

05:12 PM Nov 08, 2019 | Naveen |

ಬೀದರ: ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ಪದ್ಧತಿ ಅಳವಡಿಸಲು ಕ್ರಮ ವಹಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Advertisement

ಬೀದರ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದ್ದು, ಇದಕ್ಕೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿನ ಹಿನ್ನಡೆ ಹಾಗೂ ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೇ ಕಾರಣ. ಇನ್ನೊಂದೆಡೆ ಶಿಕ್ಷಕರು ಮನಸ್ಸಿಗೆ ಬಂದಂತೆ ಕೆಲಸಕ್ಕೆ ಹೋಗುತ್ತಾರೆ ಮತ್ತು ಮುಖ್ಯಗುರು- ಶಿಕ್ಷಕರ ನಡುವೆ ಪರಸ್ಪರ ಹೊಂದಾಣಿಕೆಯೇ ಇಲ್ಲ ಎಂದು ದೂರಿದ್ದಾರೆ.

ಶೈಕ್ಷಣಿಕವಾಗಿ ಜಿಲ್ಲೆ ಪ್ರಗತಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡುವುದರ ಜತೆಗೆ ಶಿಕ್ಷಕರ ಉಪಸ್ಥಿತಿ ಹೆಚ್ಚುಸುವ ನಿಟ್ಟಿನಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ಪದ್ಧತಿಯನ್ನು ತಕ್ಷಣವೇ ಪ್ರಾರಂಭಿಸಬೇಕು. ಬೆಳಗ್ಗೆ, ಮಧ್ಯಾಹ್ನ ಇಲಾಖೆ ಹಾಜರಾತಿ ಪಡೆಯುವಂತಾಬೇಕು. ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್‌, ಸ್ಮಾರ್ಟ್‌ಬೊರ್ಡ್‌, ಕುಡಿಯುವ ಶುದ್ಧ ನೀರು, ಶೌಚಾಲಯ, ಗ್ರಂಥಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಕಲ್ಪಿಸಬೇಕು. ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ್‌, ನಗರ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಅಮರ ಸುಲ್ತಾನಪೂರೆ, ಸಾಯಿ ಮೂಲಗೆ, ಅರವಿಂದ ಸುಂದಳಕರ, ಪವನ ಮೀರಾಗಂಜ್‌, ಗುರುಪ್ರಶಾಂತ, ಗುರು, ಪವನ, ಸೂರ್ಯಕಾಂತ, ಕೃಷ್ಣ ಕಾಂಬಳೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next