Advertisement
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಮ್ಸ್ ಬೋಧಕ ಆಸ್ಪತ್ರೆ ಆಡಳಿತ ವ್ಯವಸ್ಥೆ ಸರಿಪಡಿಸಿ ಜಿಲ್ಲೆಯ ಬಡಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವ ಕೆಲಸ ಮಾಡಲಾಗುವುದು. ನಾನು ಬಡ ಕುಟುಂಬದಿಂದ ಬಂದಿದ್ದು, ಬಡವರ ನೋವು ಅರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆಗಳು ಸಿಗುವಂತೆ ಆಡಳಿತ ವ್ಯವಸ್ಥೆ ಸರಿಪಡಿಸಲಾಗುವುದು ಎಂದು ತಿಳಿಸಿದರು.
Related Articles
Advertisement
ಸದ್ಯ ಆಸ್ಪತ್ರೆ ಹಳೆ ಕಟ್ಟಡದಲ್ಲಿ ಸ್ಥಾಪಿಸಲಾದ ಎಂಆರ್‌ಐ ಯಂತ್ರವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಮೆಡಿಕಲ್ ಕಾಲೇಜಿಗೆ ಬೇಕಾದ ಎಲ್ಲ ಮೂಲ ಸೌಲಭ್ಯ ಹಾಗೂ ಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ವೈದ್ಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ಕಂಡು ಬಂದಿದ್ದು, ಕೂಡಲೇ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಮುಂದಿನ ಜನವರಿಯಲ್ಲಿ ಮತ್ತೇ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು.
ಆಸ್ಪತ್ರೆ ಕಟ್ಟಡದ ಮೇಲ್ಛಾವಣಿ ಕುಸಿದಿರುವ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವ ಕಾರಣಕ್ಕೆ ಸಮಸ್ಯೆ ಕಂಡು ಬಂತ್ತು ಎಂಬ ವರದಿ ಬಂದ ನಂತರ ಕಟ್ಟಡ ನಿರ್ಮಿಸಿದ ಕಂಪೆನಿ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸರ್ಕಾರಕ್ಕೆ ತಿಳಿಸಲಾಗುವುದು. ಅಲ್ಲದೆ, ಆಸ್ಪತ್ರೆ ಪೂರ್ಣ ಕಟ್ಟಡದ ಪರಿಶೀಲಿಸುವಂತೆ ಮೂರನೇ ಸಂಸ್ಥೆ(ಥರ್ಡ್ ಪಾರ್ಟಿ) ಮೂಲಕ ವರದಿ ಪಡೆಯಲಾಗುವುದು ಎಂದು ತಿಳಿಸಿದರು.
ಸಹಕಾರ ಖಾತೆ ಸಚಿವ ಬಂಡೆಪ್ಪ ಖಾಶೆಂಪುರ, ಕ್ರೀಡಾ ಖಾತೆ ಸಚಿವ ರಹೀಂಖಾನ್, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ, ಸಂಸದ ಭಗವಂತ ಖೂಬಾ, ಎಂಎಲ್ಸಿ ಡಾ| ಚಂದ್ರಶೇಖರ ಪಾಟೀಲ ಇದ್ದರು.