Advertisement
13-08-2017ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಯ ಕಟ್ಟಡ ಉದ್ಘಾಟಿಸಿದ್ದರು. ನಗರದಲ್ಲಿ 450 ಹಾಸಿಗೆಗಳ ಆಸ್ಪತ್ರೆ ನಿರ್ಮಿಸುವ ಮೂಲಕ ಈ ಭಾಗದ ಬಡವರಿಗೆ ಆರೋಗ್ಯ ಸೇವೆ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ಕಟ್ಟಡ ಕಾಮಗಾರಿ ಆರಂಭಗೊಂಡ ದಿನದಿಂದಲೇ ಕಳಪೆಯಾಗಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಅಲ್ಲದೆ, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೆ ತರಾತುರಿಯಲ್ಲಿ ಆಸ್ಪತ್ರೆ ಉದ್ಘಾಟಿಸುವುದು ಬೇಡವೆಂದು ವಿರೋಧ ವ್ಯಕ್ತಪಡಿಸಿದ್ದವು.
Related Articles
Advertisement
ಕಳಪೆ ಕಾಮಗಾರಿ ಕುರಿತು ಅನೇಕ ಬಾರಿ ಆರೋಪಗಳು ಕೇಳಿ ಬಂದಿದ್ದರೂ ಜಿಲ್ಲೆಯ ಯಾವ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿದ್ದಿಲ್ಲ. ಆದರೆ, ಶನಿವಾರ ಸಂಜೆ ಸುರಿದ ಸಾಧಾರಣ ಮಳೆಗೆ ಆಸ್ಪತ್ರೆ ಮುಂಭಾಗದ ಛಾವಣಿ ಕುಸಿಯುವ ಮೂಲಕ ಕಟ್ಟಡ ಕಾಮಗಾರಿ ಕಳಪೆ ಎಂಬುದು ಸಾಬೀತು ಆದಂತಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ.
ಆಸ್ಪತ್ರೆಯ ಕಟ್ಟಡ ಕಾಮಗಾರಿ ಆರಂಭದಿಂದ, ಆಸ್ಪತ್ರೆಯಲ್ಲಿ ಖರೀದಿಸಿದ ವಸ್ತುಗಳವರೆಗೂ ರಾಜ್ಯಮಟ್ಟದ ಅಧಿಕಾರಿಗಳ ತಂಡದಿಂದ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಅಕ್ರಮಕ್ಕೆ ಸಾಥ್ ನೀಡಿದವರ, ಅಕ್ರಮ ನಡೆಸಿದವರ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು. ಈ ಅಕ್ರಮದಲ್ಲಿ ರಾಜಕಾರಣಿಗಳು, ಅಧಿಕಾರಿಗಳು, ಗುತ್ತೆದಾರರು ಯಾರೇ ಶಾಮೀಲಾಗಿದ್ದರೂ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕೆಲಸವಾಗಬೇಕು.•ಗುರುನಾಥ ರಾಜಗೀರಾ,
ಹೋರಾಟಗಾರ