Advertisement

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶ

10:44 AM Jul 10, 2019 | Team Udayavani |

ಬೀದರ್‌: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಮುಖಂಡರು ಮಂಗಳವಾರ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಸೇರಿದ ಕಾಂಗ್ರೆಸ್‌ ಕಾರ್ಯಕರ್ತರು, ಬಿಜೆಪಿಯ ಕೇಂದ್ರ ಮತ್ತು ರಾಜ್ಯ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯದ ಜನ ಬಹುಮತ ನೀಡದಿದ್ದರೂ ಬಿಜೆಪಿ ಅಧಿಕಾರಕ್ಕಾಗಿ ವಾಮಮಾರ್ಗ ಅನುಸರಿಸುತ್ತಿದೆ. ಪ್ರಜಾಪ್ರಭುತ್ವದ ವಿರುದ್ಧ ನಡೆದುಕೊಳ್ಳುತ್ತಿದೆ ಎಂದು ದೂರಿದರು. ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾಂಗ್ರೆಸ್‌ ಶಾಸಕರಿಗೆ ಕೋಟ್ಯಂತರ ರೂಪಾಯಿ ಆಮಿಷ ಒಡ್ಡಿದ್ದಾರೆ. ಅನೇಕ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಕೈಬಿಡಬೇಕು. ಜನ ನೀಡಿರುವ ತೀರ್ಪನ್ನು ಗೌರವಿಸಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಕಾರ್ಯದರ್ಶಿಗಳಾದ ಅಮೃತರಾವ್‌ ಚಿಮಕೋಡೆ, ಇರ್ಷಾದ್‌ ಅಲಿ ಪೈಲ್ವಾನ್‌, ಮುಖಂಡರಾದ ಶಂಕರ ದೊಡ್ಡಿ, ರಾಜಶೇಖರ ಪಾಟೀಲ ಅಷ್ಟೂರ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಕಾರ್ಯದರ್ಶಿ ಪರ್ವೇಜ್‌ ಕಮಲ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ ಜಾಗೀರದಾರ್‌, ನಾಗನಾಥ ಪಾಟೀಲ, ನಯೀಮ್‌ ಕಿರ್ಮಾನಿ, ಸುನೀಲ ಬಚ್ಚನ್‌, ಎಂ.ಡಿ. ಬಾಬಾ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next