Advertisement

ಅನ್ಯಾಯ ನಡೆದರೆ ಪ್ರಾಧಿಕಾರಕ್ಕೆ ದೂರು ಸಲ್ಲಿಸಿ: ಸಿದ್ರಾಮ ಟಿ.ಪಿ

05:32 PM Jul 26, 2019 | Team Udayavani |

ಬೀದರ: ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಕಿರುಕುಳ ಅಥವಾ ಅನ್ಯಾಯ ನಡೆದರೆ ಪೊಲೀಸ್‌ ದೂರು ಪ್ರಾಧಿಕಾರದ ಸಹಾಯ ಪಡೆಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ ತಿಳಿಸಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಬಾಲಕರ ಪದವಿ ಕಾಲೇಜು ಆಶ್ರಯದಲ್ಲಿ ಏರ್ಪಡಿಸಿದ್ದ ಪೊಲೀಸ್‌ ದೂರು ಪ್ರಾಧಿಕಾರ ಹಾಗೂ ಸಂತ್ರಸ್ತ ಪರಿಹಾರ ಯೋಜನೆ-2011 ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಿವೈಎಸ್‌ಪಿ ದರ್ಜೆಗಿಂತ ಕೆಳಗಿನ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಅಸ್ತಿತ್ವದಲ್ಲಿರುವ ಜಿಲ್ಲಾ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಹಾಗೂ ಡಿವೈಎಸ್‌ಪಿ ದರ್ಜೆಗಿಂತ ಮೇಲ್ಪಟ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ಯಾವುದೋ ಒಂದು ಸನ್ನಿವೇಶದಲ್ಲಿ ಕೊಲೆ ನಡೆದಲ್ಲಿ ಅಂತಹ ಕುಟುಂಬಸ್ಥರು ಬೀದಿಗೆ ಬರುವ ಸಾಧ್ಯತೆ ಇರುತ್ತದೆ. ಅವರ ಕುಟುಂಬದವರಿಗೆ ನೆರವಾಗಲು ಉಚ್ಛ ನ್ಯಾಯಾಲಯ ನಿರ್ದೇಶನದಂತೆ ರಾಜ್ಯದಲ್ಲಿ ಸಂತ್ರಸ್ತ ಪರಿಹಾರ ಯೋಜನೆ-2011 ಜಾರಿಗೆ ತರಲಾಗಿದೆ. ಅಪರಾಧಿಕ ಕೃತ್ಯದಲ್ಲಿ ವ್ಯಕ್ತಿ ಮರಣ ಹೊಂದಿದ್ದಲ್ಲಿ ಅವನನ್ನು ಅವಲಂಬಿಸಿದ ವ್ಯಕ್ತಿಗೆ ಪರಿಹಾರ ನೀಡಲಾಗುತ್ತದೆ. ಮರಣ ಹೊಂದಿದ ವ್ಯಕ್ತಿ 20 ರಿಂದ 40 ವರ್ಷದವರಾಗಿದ್ದರೆ 3 ಲಕ್ಷ, 40ರಿಂದ 60 ವರ್ಷದೊಳಗಿದ್ದಲ್ಲಿ 2 ಲಕ್ಷ ಹಾಗೂ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿದ್ದರೆ 1 ಲಕ್ಷ ರೂ. ಸಹಾಯಧನ ನೀಡಲು ಅವಕಾಶವಿರುತ್ತದೆ ಎಂದು ಹೇಳಿದರು.

ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರು ಅಥವಾ ಅವರ ಕುಟುಂಬದವರಿಗೆ ಪರಿಹಾರಧನ ಕೊಡಲು ಕಾನೂನಿನಲ್ಲಿ ಅವಕಾಶವಿರುತ್ತದೆ. ಇಂತಹ ಕೃತ್ಯಗಳು ನಡೆದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯ ಪಡೆಯಬಹುದು ಎಂದು ತಿಳಿಸಿದರು.

Advertisement

ಸರ್ಕಾರಿ ಪ.ಪೂ ಕಾಲೇಜು ಪ್ರಾಚಾರ್ಯ ಹಳ್ಳಿಖೇಡ ಎ.ಎಂ, ಉಪ ಪ್ರಾಚಾರ್ಯ ಪ್ರಕಾಶ ಡೊಂಗರೆ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಪ್ರಕಾಶ ವಿ.ಎಂ, ಜಂಟಿ ಕಾರ್ಯದರ್ಶಿ ಅಂಬಾದಾಸ ವಾಗರಾಜ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next