Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ಮಾಡದಂತೆ ಮೊದಲು ನಿಮ್ಮ ವಾಹನಗಳ ಮೂಲಕ ಪ್ರಚಾರ ನಡೆಸಬೇಕು. ಪ್ಲಾಸ್ಟಿಕ್ ಬಳಸುವುದು ಎಲ್ಲಿ ಕಾಣುತ್ತದೋ ಅಲ್ಲಿಯೇ ನಗರಸಭೆ, ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸರು ದಂಡ ವಿಧಿಸಬೇಕು. ಪತ್ರಿಕಾ ಪ್ರಕಟಣೆ ನೀಡಿ ಜನರಿಗೆ ತಿಳಿವಳಿಕೆ ಮೂಡಿಸಬೇಕು. ಆದಾಗ್ಯೂ ಪ್ಲಾಸ್ಟಿಕ್ ಬಳಸುವುದು ಕಂಡುಬಂದಲ್ಲಿ ಪ್ಲಾಸ್ಟಿಕ್ ಬಳಸುವವರ, ಮಾರಾಟ ಮಾಡುವವರ ಮತ್ತು ಉತ್ಪಾದನೆ ಮಾಡುವವರ ವಿರುದ್ಧ ನಿಯಮಾನುಸಾರ ದಂಡ ವಿಧಿಸಬೇಕು ಎಂದು ಅವರು ನಗರಸಭೆ, ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಹಳ್ಳಿಖೇಡ ಹೊರತುಪಡಿಸಿ ಎಲ್ಲಾ ಕಡೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಸ ಸಂಗ್ರಹಿಸಲಾಗುತ್ತಿದೆ. ಪ್ರತಿದಿನ 90 ಟನ್‌ನಷ್ಟು ಕಸ ಸಂಗ್ರಹವಾಗುತ್ತಿದೆ. ಹಸಿ ಕಸವನ್ನು ಪ್ರತಿದಿನ, ಒಣ ಕಸವನ್ನು ಎರಡು ದಿನಕ್ಕೊಮ್ಮೆ ಸಂಗ್ರಹಿಸಿ, ಇದರ ವಿಲೇವಾರಿಗೆ ಒತ್ತು ಕೊಡಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ಬಲಭೀಮ ಕಾಂಬಳೆ ತಿಳಿಸಿದರು.
ಹೆಚ್ಚು ಪ್ರಮಾಣದಲ್ಲಿ ಕಸ ಬರುವ ಮತ್ತು ಸರ್ಕಾರಿ ಜಮೀನು ಲಭ್ಯತೆ ಮಾನದಂಡ ಆಧರಿಸಿ ಜಿಲ್ಲೆಯಲ್ಲಿ 25 ಗ್ರಾಮಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಗುರಿ ಹೊಂದಲಾಗಿದೆ. ಈ ಗುರಿ ಸಾಧನೆಯನ್ನು ಬರುವ ಮಾರ್ಚ್ 31ರೊಳಗೆ ಮಾಡುತ್ತೇವೆ. ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಚಮೇವ ಜಯತೆ ಹಾಗೂ ಹಸೀರಿಕರಣ ಕಾರ್ಯಕ್ರಮದಡಿ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಅಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ತಮ್ಮ ಇಲಾಖೆಯಡಿ ಕಾರ್ಯ ನಿರ್ವಹಿಸುವ ವಿದ್ಯಾರ್ಥಿನಿಯರ ಎಲ್ಲ ವಸತಿ ನಿಲಯಗಳಲ್ಲಿ ಸ್ಯಾನಿಟರಿ ತ್ಯಾಜ್ಯ ವಿಲೇವಾರಿಯನ್ನು ಪ್ರತಿದಿನ ಮಾಡಬೇಕು. ಅಲ್ಲಿ ಕೆಲಸ ಮಾಡುವವರಿಗೆ ತರಬೇತಿ ಕೊಡಿಸಿ ಅಲ್ಲಿನ ತ್ಯಾಜ್ಯವನ್ನು ಅಲ್ಲಿಯೇ ಕಾಂಪೋಸ್ಟ್ ಮಾಡುವುದಕ್ಕೆ ಕ್ರಮ ವಹಿಸಿರಿ ಎಂದು ನ್ಯಾಯಮೂರ್ತಿಗಳು, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಟ್ಟಡಗಳ ಡೆಮಾಲಿಷನ್ ತ್ಯಾಜ್ಯ ನಿರ್ವಹಣೆಯನ್ನು ಕೂಡ ಮಾರ್ಗಸೂಚಿಯನುಸಾರ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆಯಲ್ಲಿ ಆರೋಗ್ಯ ಇಲಾಖೆ, ಬೆಂಗಳೂರಿನ ಉಪ ನಿರ್ದೇಶಕ ಡಾ| ವಿವೇಕ್ ದೊರೈ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.