Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಸ್ತೆ ಸುರಕ್ಷತೆ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕುಟುಂಬದಲ್ಲಿ ಯಾರೋ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರೆ, ಆ ಕುಟುಂಬಕ್ಕೆ ಆಗುವ ನಷ್ಟವನ್ನು ಯಾರಿಂದಲೂ ಭರಿಸಲು ಸಾಧ್ಯವಾಗುವುದಿಲ್ಲ. ಇದನ್ನು ನಾವು ಅರಿತು ಜನತೆ ರಸ್ತೆ ಅಪಘಾತದಲ್ಲಿ ಸಾವುಗಳು ಆಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.
ಉದ್ದೇಶವಲ್ಲ. ಸಾವು ನೋವು ತಡೆಯುವುದು ಮಹೋನ್ನತ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ರಸ್ತೆ ಅಪಘಾತದಿಂದ ಜನರ ಸಾವು ಆಗದಂತೆ ನೋಡಿಕೊಳ್ಳಲು ನಾವೇನು ಮಾಡಬಹುದು ಎಂದು ಯೋಚಿಸಬೇಕಿದೆ. ಅದಕ್ಕೆ ತಕ್ಕಂತೆ ಕ್ರಿಯಾ ಯೋಜನೆ ಸಲ್ಲಿಸಬೇಕು. ಕ್ರಿಯಾ ಯೋಜನೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದ ನಂತರ ಅವರ ಮಾರ್ಗದರ್ಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗಬೇಕು. ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗೆ ಬೇಕಿರುವ ಉಪಕರಣಗಳ ಮಾಹಿತಿ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಶಾಲಾ ಕಾಲೇಜುಗಳಿಗೆ ಅಪ್ರಾಪ್ತ ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳ ಮೂಲಕ ಹೋಗುತ್ತಿರುವುದು ಕಂಡುಬಂದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
Related Articles
Advertisement
ವಾಹನ ಸವಾರರು ಹೆಲ್ಮೇಟ್ ಹಾಗೂ ನಾಲ್ಕು ಚಕ್ರಗಳ ವಾಹನ ಸವಾರರು ತಪ್ಪದೇ ಸೀಟ್ ಬೆಲ್ಟ್ ಧರಿಸುವುದನ್ನು ಜನತೆ ರೂಢಿಸಿಕೊಂಡಲ್ಲಿ ಅಪಘಾತಗಳಲ್ಲಿ ಉಂಟಾಗುವ ಮರಣ ಪ್ರಮಾಣವನ್ನು ಗಣನೀಯವಾಗಿ ಇಳಿಕೆ ಆಗಬಹುದು. ಹಾಗಾಗಿ ವಾಹನ ಚಾಲನಾ ಸಂದರ್ಭದಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಬೇಕು. ವಾಹನ ಚಾಲನಾ ಪ್ರಮಾಣ ಪತ್ರ, ವಿಮೆ ಸೇರಿದಂತೆ ಎಲ್ಲ ಅವಶ್ಯಕ ದಾಖಲಾತಿ ಇಟ್ಟುಕೊಂಡಿರಬೇಕು ಎಂದು ಹೇಳಿದರು.
ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ನಗರಸಭೆ ಪೌರಾಯುಕ್ತ ಬಿ.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಎಂ.ಎ. ಜಬ್ಟಾರ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಪಿ.ಆರ್. ಪ್ರಶಾಂತ, ಬ್ರಿಮ್ಸ್ ನಿರ್ದೇಶಕ ಡಾ| ಕ್ಷೀರಸಾಗರ, ಸಾ.ಶಿ.ಇ ಅಧಿಕಾರಿ ಶಿವಕುಮಾರ ಸ್ವಾಮಿ ಇದ್ದರು.