Advertisement

ಮಾದಕ ವ್ಯಸನದಿಂದ ಅಂತರ ಕಾಯ್ದುಕೊಳ್ಳಿ

11:52 AM Oct 16, 2019 | Naveen |

ಬೀದರ: ಭವಿಷ್ಯವನ್ನು ನಾಶ ಮಾಡುವ ಮಾದಕ ವ್ಯಸನಗಳಿಂದ ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶೆ ಮನಗೂಳಿ ಪ್ರೇಮಾವತಿ ಹೇಳಿದರು.

Advertisement

ನಗರದ ಝೀರಾ ಫಂಕ್ಷನ್‌ ಹಾಲ್‌ನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಮಾದಕ ಔಷಧ/ಮದ್ದು ದುರ್ಬಳಕೆಗೆ ಬಲಿಯಾದವರಿಗೆ ಕಾನೂನು ಸೇವೆಗಳು ಮತ್ತು ಮಾದಕ ಔಷಧ ವಿಪತ್ತಿನ ನಿರ್ಮೂಲನೆ ಯೋಜನೆ-2015ರ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತಿಚೀನ ದಿನಗಳಲ್ಲಿ ಶಾಲಾ-ಕಾಲೇಜಿನಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಸಾಕಷ್ಟು ವಿದ್ಯಾರ್ಥಿಗಳ ಬದುಕು ನಾಶವಾಗಿದೆ.

ದೇಶದ ಸಂಪತ್ತು ಎಂದು ಕರೆಸಿಕೊಳ್ಳುವ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಮಾದಕ ವಸ್ತುಗಳ ಬಳಕೆಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಮನುಷ್ಯ ಆರೋಗ್ಯವಾಗಿರಲು ದೈಹಿಕ ಮತ್ತು ಮಾನಸಿಕವಾಗಿ ಸದೃಢನಾಗಿರಬೇಕು. ಮಾದಕ ವಸ್ತುಗಳ ಸೇವನೆಯಿಂದಾಗಿ ಮಾನಸಿಕ ಆರೋಗ್ಯ ಕುಂಠಿತವಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದಾಗುವ ಹಾನಿಯ ಬಗ್ಗೆ ತಿಳಿದುಕೊಂಡು ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

Advertisement

ಡಿವೈಎಸ್‌ಪಿ ಬಸವೇಶ್ವರ ಹೀರಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಉನ್ನತ ಗುರಿ ಇಟ್ಟುಕೊಂಡು ಸಾಧನೆಗೆ ನಿರಂತರ ಶ್ರಮಿಸಬೇಕು. ಮಾದಕ ವಸ್ತುಗಳ ಸೇವನೆ, ಸಂಗ್ರಹಣೆ, ಮಾರಾಟ ಹಾಗೂ ಪ್ರೋತ್ಸಾಹಿಸುವುದು ಕಾನೂನು ಬಾಹಿರ ಚಟುವಟಿಕೆ ಎಂದು ವಿವರಿಸಿದರು.

ಗುರು ನಾನಕ ಸಂಸ್ಥೆಗಳ ಉಪಾಧ್ಯಕ್ಷ ರೇಷ್ಮಾ ಕೌರ್‌, ಹಿರಿಯ ಸಿವಿಲ್‌ ನ್ಯಾಯಾ ಧೀಶ ಕಾರ್ಯದರ್ಶಿ ಸಿದ್ರಾಮ ಟಿ.ಪಿ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಗದೀಶ ಜಗತಾಪ, ಸಹಾಯಕ ಡ್ರಗ್ಸ್‌
ನಿಯಂತ್ರಣಾಧಿ ಕಾರಿ ಶರಣಬಸಪ್ಪ ಹನುಮನಾಳ, ಡಾ| ಪೃಥ್ವಿರಾಜ್‌ ಲಕ್ಕಿ, ಗುರುನಾನಕ ಪಿಯು ಕಾಲೇಜು ಪ್ರಾಂಶುಪಾಲ ಆಶಾ, ಕಾಲೇಜಿನ ಜಯಪ್ರಕಾಶ, ಜೋಸೆಫ್‌, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗುರು ನಾನಕ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next