Advertisement

ಅಂಗವಿಕಲರ ಸೌಕರ್ಯಕ್ಕೆ ಕಾಳಜಿ ವಹಿಸಿ

03:12 PM Apr 12, 2019 | Team Udayavani |

ಬೀದರ: ಜಿಲ್ಲಾದ್ಯಂತ ಇರುವ ಅಂಗವಿಕಲ ಮತದಾರರು ತಪ್ಪದೇ ಮತದಾನ ಮಾಡಲು ಬೇಕಾದ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಲು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಧಿಕಾರಿ ಡಾ|ಎಚ್‌.ಆರ್‌.ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾ ರಂಗಮಂದಿರದಲ್ಲಿ ಲೋಕಸಭೆ ಚುನಾವಣೆ ಪ್ರಯುಕ್ತ ಜಿಲ್ಲಾಡಳಿತ ವತಿಯಿಂದ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸೆಕ್ಟರ್‌ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು.

ಅಂಗವಿಕಲ ಮತದಾರರಿಗೆ ಜಿಲ್ಲಾಡಳಿತದಿಂದ ಸಾರಿಗೆ ಮತ್ತು ಗಾಲಿ ಖುರ್ಚಿ ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲಾ ಮತಗಟ್ಟೆಗಳಿಗೆ ರ್‍ಯಾಂಪ್‌ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳ ನಿರ್ಮಾಣಕ್ಕೆ ಒತ್ತು ಕೊಡಬೇಕು. ಆಯಾ ಹಳ್ಳಿಗಳಲ್ಲಿ ನಡೆಯುವ ಚುನಾವಣಾ ಪ್ರಚಾರ ಮತ್ತು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮೇಲೆ ಗ್ರಾಮ ಲೆಕ್ಕಾ ಧಿಕಾರಿಗಳು ನಿಗಾ
ಇಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾ ಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗವಿಕಲರ ಎಷ್ಟು ಮತಗಟ್ಟೆಗಳಿವೆ? ಎಷ್ಟು ಜನರಿದ್ದಾರೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಸಾಧ್ಯವಾದಷ್ಟು ಅವರಿಗೆ ಬೆಳಗಿನ ಸಮಯದಲ್ಲೇ
ಮತಗಟ್ಟೆಗೆ ಬಂದು ಮತದಾನ ಮಾಡುವಂತೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಸಹಾಯಕ ಆಯುಕ್ತ ಶಂಕರ ವಣಕ್ಯಾಳ ಮಾತನಾಡಿ, ಅಂಗವಿಕಲ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಮಾಡುವ ಪ್ರಯತ್ನದಲ್ಲಿ ಅಂಗವಿಕಲರಿಗೆ ಸಹಾಯ ನೀಡಲು ಆಯಾ ಗ್ರಾಮದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸ್ವಯಂಸೇವಕರನ್ನಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

Advertisement

ಈ ವೇಳೆ ಅಂಗವಿಕಲ ಮತದಾರರ ನೋಡೆಲ್‌ ಅಧಿಕಾರಿ ಗೌತಮ ಅರಳಿ ಅವರು ಮಾತನಾಡಿ, ಬೀದರ ಜಿಲ್ಲೆಯಲ್ಲಿ ಒಟ್ಟು 20,271 ಅಂಗವಿಕಲ ಮತದಾರರಿದ್ದಾರೆ. ಇವರೆಲ್ಲರನ್ನು ಮತಗಟ್ಟೆಗೆ ಕರೆ ತಂದು ಓಟು ಮಾಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಈಗಾಗಲೇ
ಅಂಗವಿಕಲ ಮತದಾರರಿಗೆ ಅಗತ್ಯ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಸಭೆಯಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಜ್ಞಾನೇಂದ್ರಕುಮಾರ ಗಂಗವಾರ, ಸಹಾಯಕ ಚುನಾವಣಾ ಧಿಕಾರಿಗಳು ಹಾಗೂ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next