Advertisement

ಜಾನುವಾರು ರಕ್ಷಣೆಗೆ ಆದ್ಯತೆ ನೀಡಿ

11:33 AM Feb 09, 2020 | |

ಬೀದರ: ಪಶುವೈದ್ಯಾಧಿಕಾರಿಗಳು ಗೋವು ಸೇರಿದಂತೆ ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಪಶು ಸಂಗೋಪನೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕರೆ ನೀಡಿದರು.

Advertisement

ರಾಜ್ಯಮಟ್ಟದ ಪಶುಮೇಳ ನಿಮಿತ್ತ ಶನಿವಾರ ನಗರದ ಕರ್ನಾಟಕ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ತಾಂತ್ರಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಪಶುವೈದ್ಯಕೀಯ ಸಂಘದ ಎಲ್ಲ ಬೇಡಿಕೆಗಳನ್ನು ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸುತ್ತೇನೆ. ಆದರೆ ಜಾನುವಾರುಗಳಿಗೆ ಸಮಸ್ಯೆಯಾದರೆ ಸುಮ್ಮನಿರಲಾಗುವುದಿಲ್ಲ. ಪಶು ಆಸ್ಪತ್ರೆಗಳನ್ನು ಶುಚಿಯಾಗಿಡಬೇಕು. ಅ ಧಿಕಾರಿಗಳು ಮತ್ತು ಸಿಬ್ಬಂದಿ 25 ವರ್ಷಕ್ಕಿಂತ ಹೆಚ್ಚು ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದು ನಿಲ್ಲಬೇಕಿದೆ ಎಂದು ಹೇಳಿದರು.

ತಾವು ಅ ಧಿಕಾರಕ್ಕೆ ಬಂದಾಗಿನಿಂದ ವಿವಿಧ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರುವ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇನೆ. ಇದರಿಂದ ಸಾಕಷ್ಟು ಪರಿವರ್ತನೆ ಕಾಣಿಸಿದೆ. ಇಲಾಖೆಯ ಅಧಿಕಾರಿಗಳು ಸಹ ತಮ್ಮ ವ್ಯಾಪ್ತಿಯಲ್ಲಿರುವ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅವರ ಕಾರ್ಯವೈಖರಿಯನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ರಾಜ್ಯಮಟ್ಟದ ಪಶುಮೇಳವನ್ನು ಬೀದರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಪಶುಸಂಗೋಪನೆ ಇಲಾಖೆ ಹಾಗೂ ಇನ್ನಿತರೆ ಅಧಿ ಕಾರಿಗಳು ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಅವರೆಲ್ಲರ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.

ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಮಾತನಾಡಿ, ಪಶು ಸಂಗೋಪನೆ ಇಲಾಖೆಯಿಂದ ಜನರ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ರೈತರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಇಲಾಖೆಯು ಇನ್ನಷ್ಟು ಕಾರ್ಯಪ್ರವೃತ್ತವಾಗಬೇಕಿದೆ ಎಂದು ತಿಳಿಸಿದರು.

Advertisement

ಕರ್ನಾಟಕ ಪಶುವೈದ್ಯಕೀಯ ಸಂಘದ ಅಧ್ಯಕ್ಷ ಡಾ|ಎಸ್‌.ಸಿ.ಸುರೇಶ್‌ ಪ್ರಾಸ್ತಾವಿಕ ಮಾತನಾಡಿದರು. ಸಂಸದ ಭಗವಂತ ಖೂಬಾ, ಜಿಪಂ ಸದಸ್ಯರಾದ ಶಕುಂತಲಾ ಬೆಲ್ದಾಳೆ, ಮಾರುತಿ ರಾಠೊಡ್‌, ತಾಪಂ ಅಧ್ಯಕ್ಷ ವಿಜಯಕುಮಾರ ಬರೂರ್‌, ಇಲಾಖೆಯ ಆಯುಕ್ತ ಎಸ್‌.ಆರ್‌. ನಟೇಶ್‌, ನಿರ್ದೇಶಕ ಡಾ|
ಎಂ.ಟಿ.ಮಂಜುನಾಥ, ಪಶು ವಿವಿ ಕುಲಪತಿ ಡಾ|ಎಚ್‌.ಡಿ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಡಾ|ಎಚ್‌.ಆರ್‌.ಮಹಾದೇವ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್‌, ರಾಜಕುಮಾರ ಸಿಂಗ್‌, ಸಿದ್ರಾಮಯ್ನಾ ಸ್ವಾಮಿ, ವಿಶ್ವನಾಥ ಪಾಟೀಲ, ಶಿವಾಜಿ ರಾಠೊಡ್‌ ಹಾಗೂ ಇತರರು ಉಪಸ್ಥಿತರಿದ್ದರು. ಪಶುವೈದ್ಯಕೀಯ ಸಂಘದ ಉಪಾಧ್ಯಕ್ಷ ಡಾ|ಸಿ.ವೀರಭದ್ರಯ್ನಾ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next